ನವೆಂಬರ್ 7 ರಂದು ಹುಬ್ಬಳ್ಳಿ, ವಿಜಯಪುರಕ್ಕೆ ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ, ರೈತರೊಂದಿಗೆ ಸಂವಾದ
ವಕ್ಫ್ ಭೂ ವಿವಾದ ಸಂಬಂಧ ವಿಜಯಪುರ ಜಿಲ್ಲೆಯ ರೈತರನ್ನು ಭೇಟಿ ಮಾಡಿ, ಚರ್ಚಿಸುವಂತೆ ತೇಜಸ್ವಿ ಸೂರ್ಯ ಅವರು ಪಾಲ್ ಅವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡುತ್ತಿದ್ದಾರೆ.

ಬೆಂಗಳೂರು: ವಕ್ಫ್(ತಿದ್ದುಪಡಿ) ಮಸೂದೆ 2024ರ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ನವೆಂಬರ್ 7 ರಂದು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡಿ, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಮಂಗಳವಾರ ತಿಳಿಸಿದ್ದಾರೆ.
ವಕ್ಫ್ ಭೂ ವಿವಾದ ಸಂಬಂಧ ವಿಜಯಪುರ ಜಿಲ್ಲೆಯ ರೈತರನ್ನು ಭೇಟಿ ಮಾಡಿ, ಚರ್ಚಿಸುವಂತೆ ತೇಜಸ್ವಿ ಸೂರ್ಯ ಅವರು ಪಾಲ್ ಅವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡುತ್ತಿದ್ದಾರೆ.
“ವಕ್ಫ್ ಅತಿಕ್ರಮಣದಿಂದ ಸಂತ್ರಸ್ತರಾದ ರೈತರೊಂದಿಗೆ ಸಂವಾದ ನಡೆಸಲು ನವೆಂಬರ್ 7 ರಂದು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡುವಂತೆ ನಾನು ಮಾಡಿದ್ದ ಮನವಿಗೆ ಜೆಪಿಸಿ ಅಧ್ಯಕ್ಷರು ಒಪ್ಪಿಗೆ ನೀಡಿದ್ದಾರೆ ಎಂದರು.
ಜೆಪಿಸಿ ಅಧ್ಯಕ್ಷರು ರೈತ ಸಂಘಟನೆಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಠಾಧೀಶರು ಮತ್ತು ಇತರರು ನೀಡಿದ ಮನವಿಗಳನ್ನು ಜೆಪಿಸಿ ಮುಂದೆ ಇಡಲಾಗುವುದು” ಎಂದು ಜೆಪಿಸಿ ಸದಸ್ಯರಾದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ.
“ರೈತರು ಸುಮಾರು ಒಂದು ಶತಮಾನದಿಂದ ತಮ್ಮ ಜಮೀನುಗಳನ್ನು ಸಾಗುವಳಿ ಮಾಡುತ್ತಿದ್ದಾರೆ. ಆದರೆ ಇತ್ತೀಚಿನ ತಿಂಗಳುಗಳಲ್ಲಿ, ಅವರಲ್ಲಿ ಹಲವರಿಗೆ ಯಾವುದೇ ದಾಖಲೆ ಅಥವಾ ವಿವರಣೆಯಿಲ್ಲದೆ ಅವರ ಭೂಮಿಯನ್ನು ವಕ್ಫ್ ಆಸ್ತಿ ಎಂದು ಘೋಷಿಸಲು ನೋಟಿಸ್ ನೀಡಲಾಗಿದೆ ಎಂದು ಬಿಜೆಪಿ ಸಂಸದ ದೂರಿದ್ದಾರೆ.
ವಕ್ಫ್ ಅತಿಕ್ರಮಣ ಮಾಡಿದ ಆಸ್ತಿಯ ಪ್ರಮಾಣವು ಗಣನೀಯವಾಗಿದೆ. ಸುಮಾರು 1,500 ಎಕರೆ ಆಸ್ತಿಯನ್ನು ಅವರ ಹಳ್ಳಿಯಲ್ಲಿಯೇ ವಕ್ಫ್ ಆಸ್ತಿ ಎಂದು ಗೊತ್ತುಪಡಿಸಲಾಗಿದೆ” ಎಂದು ಪಾಲ್ಗೆ ಬರೆದ ಪತ್ರದಲ್ಲಿ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



