ರಾಜ್ಯ

ಸರ್ಕಾರಿ ಕಛೇರಿ, ಆವರಣಗಳಲ್ಲಿ ಧೂಮಪಾನ, ತಂಬಾಕು ಸೇವನೆ ನಿಷೇಧ: ರಾಜ್ಯ ಸರ್ಕಾರ ಆದೇಶ

ಧೂಮಪಾನ ಹಾಗೂ ತಂಬಾಕಿನ ಇತರೆ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇ೦ತಹ ಉತ್ಪನ್ನಗಳ ಸೇವನೆಯನ್ನು ಸ೦ಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಕಛೇರಿ, ಆವರಣಗಳಲ್ಲಿ ಧೂಮಪಾನ, ತಂಬಾಕು ಸೇವನೆ ನಿಷೇಧ: ರಾಜ್ಯ ಸರ್ಕಾರ ಆದೇಶ
ಧೂಮಪಾನ, ತಂಬಾಕು ಸೇವನೆ ನಿಷೇಧ
Published On :

ಬೆಂಗಳೂರು: ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿ ಆವರಣಗಳಲ್ಲಿ ಧೂಮಪಾನ ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಧೂಮಪಾನ ಹಾಗೂ ತಂಬಾಕಿನ ಇತರೆ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇ೦ತಹ ಉತ್ಪನ್ನಗಳ ಸೇವನೆಯನ್ನು ಸ೦ಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ(ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ.

ಶಾಸನಾತ್ಮಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿ೦ದ ಹಾಗೂ ಪರೋಕ್ಷ ಧೂಮಪಾನದಿ೦ದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬ೦ದಿಗಳನ್ನು ರಕ್ಷಿಸುವ ಉದ್ದೇಶದಿ೦ದ ಈ ಕ್ರಮ ಕೈಗೊಳ್ಳಲಾಗಿದೆ.

ಅದರಂತೆ ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸ೦ಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಸ೦ಬ೦ಧ ಎಚ್ಚರಿಕೆಯ ಫಲಕವನ್ನು ಕಛೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸತಕ್ಕದ್ದು. ಈ ಸೂಚನೆಗಳನ್ನು ಉಲ್ಲಂಘಿಸಿ ಯಾವುದೇ ಸರ್ಕಾರಿ ನೌಕರ ಕಛೇರಿಯಲ್ಲಿ ಅಥವಾ ಕಛೇರಿಯ ಆವರಣದಲ್ಲಿ ಧೂಮಪಾನ ಮಾಡುವುದು ಮತ್ತು ಯಾವುದೇ ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್‌ ಮಸಾಲ, ಹೊಗೆಸೊಪ್ಪು,ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳತಕ್ಕದ್ದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.