ಶಿವಮೊಗ್ಗ: ಜಾಹಿರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ಮರ ಹಾಗೂ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಶಿವಮೊಗ್ಗ: ಶಿವಮೊಗ್ಗ ಹೊರವಲಯದ ತೀರ್ಥಹಳ್ಳಿ ರಸ್ತೆಯಲ್ಲಿ ಶುಕ್ರವಾರ ಜಾಹಿರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಕಾಲೇಜ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತೀರ್ಥಹಳ್ಳಿ ರಸ್ತೆಯ ಹರಕೆರೆ ಸಮೀಪದ ಕಾನೇಹಳ್ಳದ ಬಳಿ ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ಮರ ಹಾಗೂ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳನ್ನು ಆರ್ ಎಂಎಲ್ ನಗರದ ನಿಸಾರ್(18) ಹಾಗೂ ಮಂಜುನಾಥ ಬಡಾವಣೆಯ ಯಶವಂತ್(20) ಎಂದು ಗುರುತಿಸಲಾಗಿದೆ.
ಕೆಟಿಎಂ ಬೈಕ್ ನಲ್ಲಿ ತೀರ್ಥಹಳ್ಳಿ ಮಾರ್ಗವಾಗಿ ಗಾಜನೂರು ಐಟಿಐ ಕಾಲೇಜಿಗೆ ಈ ಯುವಕರು ತೆರಳುತ್ತಿದ್ದರು. ಈ ವೇಳೆ ಅತಿಯಾದ ವೇಗದಿಂದ ಬೈಕ್ ನಿಯಂತ್ರಣ ತಪ್ಪಿ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



