Bantwal Accident: ಬ್ರೇಕ್ ಫೇಲ್ ಆಗಿ ಉರುಳಿ ಬಿದ್ದ ಕಾರು; 8 ವಿದ್ಯಾರ್ಥಿಗಳಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ, Video
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಮತ್ತು ಚಾಲಕನಿಗೆ ಗಂಭೀರ ಗಾಯವಾಗಿದ್ದು, 8 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಂಗಳೂರು: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ 8 ಮಕ್ಕಳು ಹಾಗೂ ಚಾಲಕ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಮುಚ್ಚಿಲಪದವು ಎಂಬಲ್ಲಿ ಈ ಘಟನೆ ನಡೆದಿದ್ದು, ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.
ಈ ವೇಳೆ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಮತ್ತು ಚಾಲಕನಿಗೆ ಗಂಭೀರ ಗಾಯವಾಗಿದ್ದು, ಎಂಟು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಮಂಗಳೂರು ಮತ್ತು ಬಂಟ್ವಾಳದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನ ಚಾಲಕ ಮುಳಿಯ ರಾಮಣ್ಣ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅಪಘಾತಕ್ಕೆ ಕಾರಿನ ಬ್ರೇಕ್ ಫೇಲ್ ಆಗಿದ್ದೇ ಕಾರಣ ಎನ್ನಲಾಗಿದ್ದು, ವಾಹನವು ಪೆರುವಾಯಿಯಿಂದ ವಿಟ್ಲದಲ್ಲಿರುವ ಶಾಲಾ ಬಸ್ ನಿಲ್ದಾಣದಲ್ಲಿ ಮಕ್ಕಳನ್ನು ಬಿಡಲು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



