ವಾಲ್ಮೀಕಿ ನಿಗಮ ಹಗರಣ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲಾಗದು. ಪೊಲೀಸ್ ಅಧಿಕಾರವು ಶಾಸನಬದ್ಧವಾಗಿದ್ದು, ಅದು ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿದೆ.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.
ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಕ್ಕೆ ಸಂಬಂಧಿಸಿದಂತೆ ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ ಸೆಕ್ಷನ್ 35ಎ ಅಡಿ ವ್ಯಾಖ್ಯಾನವನ್ನು ಒಪ್ಪಲಾಗದು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕೋರಿಕೆಗೆ ಅನುಮತಿಸಿದರೆ ಪ್ರತಿಯೊಂದು ಬ್ಯಾಂಕಿಂಗ್ ಸಂಸ್ಥೆಯು ತನಿಖೆಗೆ ಕೋರಬಹುದು. ಹೀಗೆ ಮಾಡಿದರೆ ದೆಹಲಿ ಪೊಲೀಸ್ ಸ್ಥಾಪನಾ ಕಾಯಿದೆಯು ಅನುಪಯುಕ್ತವಾಗಲಿದೆ ಎಂದು ಪೀಠ
ರಾಜ್ಯ ಸರ್ಕಾರದ ಪರವಾಗಿ ವಾದಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ ವಿ ಆಚಾರ್ಯ ಅವರು, ಯಾವುದೇ ಪ್ರಕರಣದ ತನಿಖೆ ನಡೆಸುವ ಅಂತರ್ಗತ ಅಧಿಕಾರ ಸಿಬಿಐಗೆ ಇಲ್ಲ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲಾಗದು. ಪೊಲೀಸ್ ಅಧಿಕಾರವು ಶಾಸನಬದ್ಧವಾಗಿದ್ದು, ಅದು ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿದೆ. ಸಿಬಿಐ ಎಂದರೆ ಕೇಂದ್ರ ಸರ್ಕಾರದ ಪ್ರತಿರೂಪ ಎಂದು ವಾದಿಸಿದರು.
ಯೂನಿಯನ್ ಬ್ಯಾಂಕ್ ಪ್ರತಿನಿಧಿಸಿದ್ದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಸಿಬಿಐ ಕೇಂದ್ರ ಸರ್ಕಾರದ ಪ್ರತಿರೂಪ ಎಂಬ ವಾದಕ್ಕೆ ಆಕ್ಷೇಪಿಸಿದರು. ಸಿಬಿಐ ಕೇಂದ್ರ ಸರ್ಕಾರದ ಪ್ರತಿರೂಪ ಎಂಬ ಕುರಿತು ವಾದಿಸಲು ಇಚ್ಛಿಸುವುದಿಲ್ಲ. ಅದು ಈ ಪ್ರಕರಣಕ್ಕೆ ಹೊಂದುವುದಿಲ್ಲ. ಇಂಥ ಪ್ರಕರಣದಲ್ಲಿ ಸಿಬಿಐ ಒಂದೇ ತನಿಖಾ ಸಂಸ್ಥೆ ಎಂದು ಆರ್ಬಿಐ ಹೇಳಿದೆ. ಬ್ಯಾಂಕಿಂಗ್ ಕ್ಷೇತ್ರದ ನಿರ್ವಹಣೆಗೆ ವ್ಯವಸ್ಥಿತ ಆಪತ್ತು ಎದುರಾದಾಗ ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ ಸೆಕ್ಷನ್ 35ಎ ಅನ್ವಯಿಸುತ್ತದೆ ಎಂದು ವಾದಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



