ಇ-ಸ್ವತ್ತು ಮಂಜೂರು ಪ್ರಕ್ರಿಯೆ ಸರಳೀಕರಣಕ್ಕೆ ಕಾರ್ಯಪಡೆ: ಸಚಿವ ಪ್ರಿಯಾಂಕ್ ಖರ್ಗೆ
ಇ-ಖಾತಾ ಸಂಬಂಧ ಬುಧವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ ಮಂಗಳವಾರ ಅವರು ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆಯನ್ನು ಸರಳೀಕರಣ ಹಾಗೂ ಸಬಲೀಕರಣಗೊಳಿಸುವ ಸಲುವಾಗಿ ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯಪಡೆ ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಹೇಳಿದರು.
ಇ-ಖಾತಾ ಸಂಬಂಧ ಬುಧವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ ಮಂಗಳವಾರ ಅವರು ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಗ್ರಾಮೀಣ ವ್ಯಾಪ್ತಿಯ ಹೊರ ಭಾಗದ ಬಹಳಷ್ಟು ಪ್ರದೇಶಗಳಲ್ಲಿ ಶಾಲೆಗಳು, ಉದ್ದಿಮೆಗಳು ಹಾಗೂ ವಸತಿ ಸಮುಚ್ಚಯಗಳು ನಿರ್ಮಾಣಗೊಂಡಿವೆ. ಬಹುಪಾಲು ಆಸ್ತಿಗಳು ಗ್ರಾ.ಪಂ. ತೆರಿಗೆ ವ್ಯಾಪ್ತಿಗೆ ಒಳಪಡದೆ ಇರುವುದರಿಂದ ಗ್ರಾ.ಪಂ.ಗಳ ಸಂಪನ್ಮೂಲ ಕ್ರೋಡೀಕರಣ ದಲ್ಲಿ ಹಿನ್ನಡೆ ಉಂಟಾಗಿದೆ.
ಹೀಗಾಗಿ ಗ್ರಾ.ಪಂ.ಗಳನ್ನು ಸದೃಢಗೊಳಿಸುವಲ್ಲಿ ಇ-ಸ್ವತ್ತು ದಾಖಲೆ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಅನಿವಾರ್ಯ ಇದೆ. ಈ ಹಿನ್ನೆಲೆಯಲ್ಲಿ ಕಾರ್ಯಪಡೆ ರಚಿಸಲಾಗುವುದು. ಗ್ರಾಮಗಳಿಗೆ ಹೊಂದಿಕೊಂಡಂತೆ ಕಂದಾಯ ಭೂಮಿಯಲ್ಲಿ ಬಡಾವಣೆಗಳು ನಿರ್ಮಾಣಗೊಂಡಿದ್ದು, ಇಂತಹ ಬಡಾವಣೆಗಳಲ್ಲಿನ ನಿವಾಸಿಗಳು ಇ-ಸ್ವತ್ತು ದಾಖಲೆಯನ್ನು ಸುಗಮವಾಗಿ ಪಡೆದುಕೊಳ್ಳುವಲ್ಲಿ ಪರಿಹಾರಗಳನ್ನು ಕಾರ್ಯಪಡೆ ಸೂಚಿಸಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



