Covid ಹಗರಣದ ತನಿಖೆಗೆ SIT ರಚನೆ ತೀರ್ಮಾನ: BJP ಸಂಸದ ಡಾ. ಸಿ.ಎನ್ ಮಂಜುನಾಥ್ಗೂ ಸಂಕಷ್ಟ?
ಕೋವಿಡ್ ಹಗರಣ ಕುರಿತಂತೆ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು, 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಿದೆ.

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ ಇದೀಗ ಬಿಜೆಪಿ ಸಂಸದ ಡಾ. ಸಿಎನ್ ಮಂಜುನಾಥ್ ಅವರಿಗೆ ಸಂಕಷ್ಟ ಎದುರಾಗಿದೆ.
ಕೋವಿಡ್ ಹಗರಣ ಕುರಿತಂತೆ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು, 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಎನ್ ಮಂಜುನಾಥ್ ಕೋವಿಡ್ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಮುಖ್ಯಸ್ಥರಾಗಿದ್ದರು. ಟಾಸ್ಕ್ ಫೋರ್ಸ್ ನಿರ್ಣಯದಂತೆ ಕೆಲ ಉಪಕರಣಗಳ ಖರೀದಿ ಆಗಿದೆ. ಈ ಹಿನ್ನೆಲೆ ಟಾಸ್ಕ್ ಫೋರ್ಸ್ ಬಗ್ಗೆಯೂ ಕುನ್ಹಾ ವರದಿಯಲ್ಲಿ ಪ್ರಸ್ತಾಪವಾಗಿದೆ. ಇದು ಮಂಜುನಾಥ್ ಅವರಿಗೆ ಸಂಕಷ್ಟ ತಂದಿಟ್ಟಿದೆ.
ಕೊವಿಡ್ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು. ಈ ಕುರಿತು ಸಮಗ್ರ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಗತ್ಯ ಬಿದ್ದರೆ FIR ದಾಖಲಾಗುತ್ತೆ, ಚಾರ್ಜ್ ಶೀಟ್ ಕೂಡ ಹಾಕುತ್ತೇವೆ. ಯಾರ ವಿರುದ್ಧ FIR ದಾಖಲಿಸಬೇಕೆಂದು SIT ನಿರ್ಧರಿಸುತ್ತದೆ ಎಂದು ಸಚಿವ ಎಚ್ ಕೆ ಪಾಟೀಲ್ ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



