ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಮತ್ತೊಂದು ದೂರು; ಗಡಿಪಾರಿಗೆ ಆಗ್ರಹ
ಸ್ನೇಹಮಹಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಇಂದು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಶನಿವಾರ ಮತ್ತೊಂದು ದೂರು ದಾಖಲಿಸಿದೆ.
ಸ್ನೇಹಮಹಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಇಂದು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ವೇಳೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ ಅವರು, ಎರಡು ತಿಂಗಳ ಹಿಂದೆ ಸ್ನೇಹಮಯಿ ಕೃಷ್ಣ ಅವರ ಸ್ನೇಹಿತರು ಎಂದು ಹೇಳಿಕೊಂಡು ಇಬ್ಬರು ನನ್ನನ್ನು ಸಂಪರ್ಕಿಸಿದ್ದರು. ಪ್ರಕರಣ ಮುಚ್ಚಿ ಹಾಕಲು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮೂರು ದಿನದ ಹಿಂದೆ ಮತ್ತೆ ನನ್ನನ್ನು ಈ ಇಬ್ಬರೂ ಸಂಪರ್ಕಿಸಿದ್ದು, ನನಗೆ ಬೆದರಿಕೆ ಹಾಕಿದ್ದಾರೆ. ಸ್ನೇಹಮಯಿ ಕೃಷ್ಣ ವಿರುದ್ಧ ಆರೋಪ ಮುಂದುವರಿಸಿದರೆ ನಿಮ್ಮ ವಿರುದ್ಧವೂ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದರು.
ಸ್ನೇಹಮಯಿ ಕೃಷ್ಣ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 44 ಪ್ರಕರಣ ದಾಖಲಾಗಿದ್ದು, ಇದರಲ್ಲಿ 22 ಪ್ರಕರಣಗಳ ಎಫ್ ಐಆರ್ ನಮ್ಮಲ್ಲಿದೆ. ಈತ ರೌಡಿಶೀಟರ್ ಅಗಿದ್ದರೂ ಕಳೆದ ಮೂರುವರೆ ವರ್ಷದಿಂದ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಬ್ಲಾಕ್ ಮೇಲರ್ ವಿರುದ್ಧ ಪೊಲೀಸರು ಕ್ರಮ ಜರುಗಿಸಬೇಕು. ಭಾನುವಾರ ಬೆಳಗ್ಗೆ 10 ಗಂಟೆ ಒಳಗೆ ಎಫ್ ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದರೆ ಪೊಲೀಸ್ ಠಾಣೆ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತೇವೆ ಎಂದರು.
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ವಿರುದ್ಧ ನಕಲಿ ಚಲನ್ ಸೃಷ್ಟಿಸಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅದಕ್ಕೆ ನಕಲಿ ಸೀಲ್ ಬಳಸಲಾಗಿದೆ. ಈ ದಾಖಲೆಯನ್ನು ನಾವು ಕೊಟ್ಟೇ ಇಲ್ಲ ಎಂದು ಮುಡಾ ಅಧಿಕಾರಿಗಳು ಹೇಳುತ್ತಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



