ಮಂಗಳೂರು: ಸಿಡಿಲು ಬಡಿದು ಬಾಲಕ ಸಾವು
ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮಂಗಳೂರು: ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ಗಡಿಯಾರ ನಿವಾಸಿ ಸುಭೋದ್(14) ಮೃತಪಟ್ಟ ಬಾಲಕ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುಭೋದ್ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಆಸ್ಪತ್ರೆಗೆ ವಿಟ್ಲ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ, ಕೆದಿಲ ಗ್ರಾಮ ಆಡಳಿತ ಅಧಿಕಾರಿ ಅನಿಲ್ ಕುಮಾರ್, ಕೆದಿಲ ಗ್ರಾ.ಪಂ. ಅಧ್ಯಕ್ಷ ಹರೀಶ್ ವಾಲ್ತಾಜೆ, ಗ್ರಾ.ಪಂ. ಸದಸ್ಯರಾದ ಉಮೇಶ್ ಮುರುವ, ಅಜೀಜ್ ಪುತ್ತೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



