Karnataka Weather | ಹವಾಮಾನ ವರದಿ: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ
ಕಳೆದೆರಡು ದಿನಗಳಿಂದ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರೆದಿದ್ದು, ಶನಿವಾರ ಹಲವೆಡೆ ಮಳೆಯಾಗಿತ್ತು. ಆದರೆ ಭಾನುವಾರ ಮೋಡವಿದ್ದರೂ ಮಳೆ ಬಂದಿರಲಿಲ್ಲ. ಇದೀಗ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೋಮವಾರ ಮಾಹಿತಿ ನೀಡಿದೆ.
ಕಳೆದೆರಡು ದಿನಗಳಿಂದ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರೆದಿದ್ದು, ಶನಿವಾರ ಹಲವೆಡೆ ಮಳೆಯಾಗಿತ್ತು ಆದರೆ ಭಾನುವಾರ ಮೋಡವಿದ್ದರೂ ಮಳೆ ಬಂದಿರಲಿಲ್ಲ.
ಇದೀಗ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದ್ದು, ಉಪ್ಪಿನಂಗಡಿ, ಶ್ರವಣಬೆಳಗೊಳ, ಹೊಸಕೋಟೆ, ಅರಕಲಗೂಡು, ಚಿಂತಾಮಣಿ, ನಾಗಮಂಗಲ, ಚಾಮರಾಜನಗರ, ಕೋಲಾರದಲ್ಲೂ ಮಳೆ ಬೀಳಲಿದೆ ಎಂದು ಹೇಳಲಾಗಿದೆ.
ಮುಂದಿನ 2 ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ. ನವೆಂಬರ್ 20ರ ಬಳಿಕ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದ್ದು, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ17.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಕುಸಿದ ತಾಪಮಾನ
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದ ಹಿನ್ನಲೆಯಲ್ಲಿ ನಗರದ ವಿವಿಧೆಡೆ ತಾಪಮಾನ ಕುಸಿತವಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



