ರಾಜ್ಯ

Video: ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ Suryakumar Yadav ಭೇಟಿ, ವಿಶೇಷ ಪೂಜೆ ಸಲ್ಲಿಕೆ!

ಸೂರ್ಯಕುಮಾರ್‌ ಯಾದವ್ ದಂಪತಿ ಇಲ್ಲಿನ ಶ್ರೀಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಸೇವೆ, ಹಾಗೂ ನಾಗ ಪ್ರತಿಷ್ಠಾಪನ ಪೂಜೆಯನ್ನು ನೆರವೇರಿಸಿದರು.

Video: ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ Suryakumar Yadav ಭೇಟಿ, ವಿಶೇಷ ಪೂಜೆ ಸಲ್ಲಿಕೆ!
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ಯಾದವ್
Published On :

ಮಂಗಳೂರು: ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಇಂದು ಕುಟುಂಬ ಸಮೇತ ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಸೂರ್ಯಕುಮಾರ್ ಯಾದವ್ ಅವರು ಪತ್ನಿ ದೇವಿಶಾ ಸೇರಿದಂತೆ ಕುಟುಂಬಸ್ಥರ ಜೊತೆ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸೂರ್ಯಕುಮಾರ್‌ ಯಾದವ್ ದಂಪತಿ ಇಲ್ಲಿನ ಶ್ರೀಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಸೇವೆ, ಹಾಗೂ ನಾಗ ಪ್ರತಿಷ್ಠಾಪನ ಪೂಜೆಯನ್ನು ನೆರವೇರಿಸಿದರು.

ಈ ವೇಳೆ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ದಂಪತಿಯನ್ನು ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಶಾಲು ಹೊದಿಸಿ ಗೌರವಿಸಿದರು.

ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಹಾಗೂ ದೇವಸ್ಥಾನದ ಸಿಬ್ಬಂದಿ ಜೊತೆಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.