ಅನುದಾನ ಹಂಚಿಕೆಯಲ್ಲಿ ಅನ್ಯಾಯ: ಸ್ವಪಕ್ಷದ ವಿರುದ್ಧವೇ ಶಾಸಕ ಗವಿಯಪ್ಪ ಆಕ್ರೋಶ
ನನ್ನ ಕ್ಷೇತ್ರ ಅಭಿವೃದ್ಧಿ ಮಾಡಲು ಹಣ ಇಲ್ಲ. ನಮ್ಮದೇ ಸರ್ಕಾರ ಇದ್ದರೂ ಅನುದಾನ ಬಿಡುಗಡೆ ಆಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಗವಿಯಪ್ಪ ಅವರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜು ಕಾಗೆ ಬಳಿಕ ರಾಜ್ಯ ಸರ್ಕಾರದ ವಿರುದ್ಧ ಮತ್ತೊಬ್ಬ ಶಾಸಕ ತಿರುಗಿ ಬಿದ್ದಿದ್ದು, ಅನುದಾನ ವಿಚಾರ ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಕ್ಷೇತ್ರ ಅಭಿವೃದ್ಧಿ ಮಾಡಲು ಹಣ ಇಲ್ಲ. ನಮ್ಮದೇ ಸರ್ಕಾರ ಇದ್ದರೂ ಅನುದಾನ ಬಿಡುಗಡೆ ಆಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಗವಿಯಪ್ಪ ಅವರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮ್ಮ ಸಚಿವರೇ ನಮಗೆ ಕಿಮ್ಮತ್ತು ಕೊಡುತ್ತಿಲ್ಲ. ಇದೇ ರೀತಿ ಮುಂದುವರಿದೆ ಮುಂದಿನ ದಿನಗಳಲ್ಲಿ ವಿಧಾನಸೌಧದ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ನಾನು ಯಾವ ಪುರುಷಾರ್ಥಕ್ಕಾಗಿ ಶಾಸಕನಾಗಿರಬೇಕು ನಮ್ಮದೇ ಕ್ಷೇತ್ರದ ಜನರ ಸಮಸ್ಯೆಗಳಿಗೆ ನನ್ನಿಂದ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಆಡಳಿತ ಪಕ್ಷದ ಶಾಸಕರೇ ಈ ರೀತಿ ಹೇಳಿಕೊಳ್ಳಬೇಕಾದರೆ, ಪರಿಸ್ಥಿತಿ ಏನಾಗಿರಬೇಕು ಹೇಳಿ ಎಂದು ತಿಳಿಸಿದ್ದಾರೆ.
ಈ ಹಿಂದೆ ಇದ್ದ ಬಿಜೆಪಿ ಶಾಸಕ ಆನಂದ್ ಸಿಂಗ್ ತಂದ ಅನುದಾನದಲ್ಲಿಯೇ ಒಂದೂವರೆ ವರ್ಷ ಕೆಲಸ ನಡೆದಿದೆ. ಈಗಲಾದರೂ ನಮಗೆ ಕೆಲಸ ಮಾಡಲು ಅನುದಾನ ಬೇಕಲ್ವಾ? ಕೆಕೆಆರ್‌ಡಿಬಿಯಿಂದ ನೂತನ ವಿಜಯನಗರ ಜಿಲ್ಲೆಗೆ ಒಟ್ಟು 348 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ವಿಜಯನಗರ ಜಿಲ್ಲೆಯ ಬೇರೆ ಬೇರೆ ಕ್ಷೇತ್ರಗಳಿಗೆ 60, 70 ಕೋಟಿ ರೂ. ಅನುದಾನ ನೀಡಿದ್ದಾರೆ. ವಿಜಯನಗರ ಕ್ಷೇತ್ರಕ್ಕೆ ಕೇವಲ 22 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ 12 ಕೋಟಿ ರೂ. ಅನುದಾನ ನೀಡಿದ್ದೇನೆ. ಉಳಿದ 8 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರದಲ್ಲಿ ಏನು ಕೆಲಸ ಮಾಡಲು ಸಾಧ್ಯವಾಗುತ್ತೆ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದವೂ ಅಸಮಾಧಾನ ಹೊರ ಹಾಕಿರುವ ಅವರು, ಜಿಲ್ಲೆಗೆ ಬರುವ ಅನುದಾನದಲ್ಲಿ ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ಉಸ್ತುವಾರಿ ಸಚಿವರು ಶೇ.25ರಷ್ಟು ಅನುದಾನ ಮೀಸಲಿಡಬೇಕು. ಅದು ಜಿಲ್ಲಾ ಉಸ್ತುವಾರಿ ಸಚಿವರ ಕೈಯಲ್ಲಿ ಇರುತ್ತದೆ. ನಮ್ಮ ಜಿಲ್ಲಾ ಉಸ್ತುವಾರಿ ಜಮೀರ್ ಅಹ್ಮದ್ ಅವರು ಅದನ್ನು ಮಾಡಿಲ್ಲ. ಬೇಕಾದರೆ ಅವರ ವಿವೇಚನೆಗೆ ಬಂದಂತೆ ಅನುದಾನ ಬಳಸಲಿ. ನಾನು ಏನೂ ಕೇಳಲ್ಲ. ಒಟ್ಟಿನಲ್ಲಿ ನನ್ನ ಕ್ಷೇತ್ರದಲ್ಲಿ ಕೆಲಸ ಆಗಬೇಕು ಎಂದು ಅಸಮಾಧಾನ ಹೊರ ಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



