ಬೆಂಗಳೂರು: ವೈದ್ಯಕೀಯ ಪಿಜಿ ಕೋರ್ಸ್‌ಗಳಿಗೆ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ
ಅರ್ಹ ಅಭ್ಯರ್ಥಿಗಳು ನವೆಂಬರ್ 19 ರಂದು ಮಧ್ಯಾಹ್ನ 2 ಗಂಟೆಯಿಂದ ನವೆಂಬರ್ 22 ರಂದು ಸಂಜೆ 4 ಗಂಟೆಯವರೆಗೆ ತಮ್ಮ ಆದ್ಯತೆ ಸೀಟ್ ನಮೂದಿಸಬಹುದು. ನವೆಂಬರ್ 23 ರಂದು ಸಂಜೆ 4 ಗಂಟೆಯ ನಂತರ ಅಣಕು ಸೀಟು ಹಂಚಿಕೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಸಕ್ತ ಶೈಕ್ಷಣಿಕ ವರ್ಷದ ಸ್ನಾತಕೋತ್ತರ (ಪಿಜಿ) ವೈದ್ಯಕೀಯ ಕೋರ್ಸ್‌ಗಳ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರಗಳನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸೋಮವಾರ ಬಿಡುಗಡೆ ಮಾಡಿದೆ.
ಅರ್ಹ ಅಭ್ಯರ್ಥಿಗಳು ನವೆಂಬರ್ 19 ರಂದು ಮಧ್ಯಾಹ್ನ 2 ಗಂಟೆಯಿಂದ ನವೆಂಬರ್ 22 ರಂದು ಸಂಜೆ 4 ಗಂಟೆಯವರೆಗೆ ತಮ್ಮ ಆದ್ಯತೆ ಸೀಟ್ ನಮೂದಿಸಬಹುದು. ನವೆಂಬರ್ 23 ರಂದು ಸಂಜೆ 4 ಗಂಟೆಯ ನಂತರ ಅಣಕು ಸೀಟು ಹಂಚಿಕೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಮತ್ತು ಅಭ್ಯರ್ಥಿಗಳು ತಮ್ಮ ಆದ್ಯತೆಗಳನ್ನು ನವೆಂಬರ್ 23 ರಂದು ಸಂಜೆ 4 ರಿಂದ ನವೆಂಬರ್ 25 ರ ಸಂಜೆ 4 ರವರೆಗೆ ಬಗಲಾವಣೆಗೆ ಅವಕಾಶವ ಹೊಂದಿರುತ್ತಾರೆ.
ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ನವೆಂಬರ್ 26 ರಂದು ರಾತ್ರಿ 8 ಗಂಟೆಯ ನಂತರ ಪ್ರಕಟಿಸಲಾಗುವುದು. ಸೀಟು ಹಂಚಿಕೆಯಾದ ಅಭ್ಯರ್ಥಿಗಳು ನವೆಂಬರ್ 27 ಮತ್ತು 29 ರ ನಡುವೆ ತಮ್ಮ ಅಂತಿಮ ಆಯ್ಕೆಯನ್ನು ಆರಿಸಿಕೊಳ್ಳಬೇಕು ಮತ್ತು ಡಿಸೆಂಬರ್ 2 ರೊಳಗೆ ಅಗತ್ಯ ಶುಲ್ಕವನ್ನು ಪಾವತಿಸಬೇಕು. ಭರ್ತಿಯಾಗದ ಪದವಿಪೂರ್ವ (ಯುಜಿ) ವೈದ್ಯಕೀಯ ಸೀಟುಗಳು ಮತ್ತು ಉಳಿದ ದಂತ ವೈದ್ಯಕೀಯ ಸೀಟುಗಳಿಗೆ ಮಾರ್ಪಡಿಸುವ ಸುತ್ತು ಮಂಗಳವಾರ ಆರಂಭವಾಗಲಿದೆ. ಈ ಸುತ್ತಿನಲ್ಲಿ ಸೀಟುಗಳನ್ನು ಹಂಚಿಕೆ ಮಾಡಿದ ಅಭ್ಯರ್ಥಿಗಳು ನವೆಂಬರ್ 29 ರಂದು ಮೂಲ ದಾಖಲೆಗಳೊಂದಿಗೆ ಆಯಾ ಕಾಲೇಜುಗಳಿಗೆ ವರದಿ ಮಾಡಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



