ಹಂಪಿ ವಿವಿಯಲ್ಲಿ ಆರ್ಥಿಕ ಬಿಕ್ಕಟ್ಟು: SC/ST ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿಳಂಬ, ಪ್ರತಿಭಟನೆಗೆ ಮುಂದು
ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಕಳೆದ ಹಲವು ವರ್ಷಗಳಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಎರಡು ವರ್ಷಗಳ ವಿದ್ಯುತ್ ಬಿಲ್ ಪಾವತಿಸಲು ವಿಫಲವಾದ ಕಾರಣ ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿ ಕೆಲವು ತಿಂಗಳ ಹಿಂದೆ ವಿಶ್ವವಿದ್ಯಾಲಯಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿತ್ತು.

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಆರ್ಥಿಕ ಬಿಕ್ಕಟ್ಟು ಉಲ್ಬಣಗೊಂಡಿದ್ದು, 2023-24ನೇ ಶೈಕ್ಷಣಿಕ ವರ್ಷದ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಇದರಿಂದ ಅಸಮಾಧಾನಗೊಂಡಿರುವ ವಿದ್ಯಾರ್ಥಿಗಳು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.
ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಕಳೆದ ಹಲವು ವರ್ಷಗಳಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಎರಡು ವರ್ಷಗಳ ವಿದ್ಯುತ್ ಬಿಲ್ ಪಾವತಿಸಲು ವಿಫಲವಾದ ಕಾರಣ ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿ ಕೆಲವು ತಿಂಗಳ ಹಿಂದೆ ವಿಶ್ವವಿದ್ಯಾಲಯಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿತ್ತು.
ಬಳಿಕ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಶೀಘ್ರವೇ ಬಾಕಿ ಪಾವತಿಸಲು ಕ್ರಮಕೈಗೊಳ್ಳಲಾಗುವುದು ಎಂದು ಕಂಪನಿಗೆ ಭರವಸೆ ನೀಡಿತ್ತು. ನಂತರ ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸಲಾಗಿತ್ತು.
ಹಂಪಿ ಕನ್ನಡ ವಿವಿಯ 100ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರಿಗೂ ಕಳೆದ 8 ತಿಂಗಳುಗಳಿಂದ ವೇತನ ಪಾವತಿಯಾಗಿಲ್ಲ. ಅವರಿಗೂ ಬಾಕಿ ಇರುವ ವೇತನವನ್ನು ಶೀಘ್ರವೇ ಮಂಜೂರು ಮಾಡುವುದಾಗಿ ಭರವಸೆ ನೀಡಲಾಗಿದೆ.
ಇದೀಗ 130 ಕ್ಕೂ ಹೆಚ್ಚು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಬಿಡುಗಡೆಯಾಗದಿರುವುದು ವಿವಿಯ ಪ್ರತಿಷ್ಠೆಗೆ ಹೊಡೆತ ಬೀಳುವಂತೆ ಮಾಡಿದೆ.
ಸರಕಾರ ಕೂಡಲೇ ಹಣ ಬಿಡುಗಡೆ ಮಾಡಲು ವಿಫಲವಾದರೆ ನಿರ್ವಹಣೆ ಕಷ್ಟವಾಗಲಿದೆ ಎಂದು ಎಸ್‌ಸಿ ಸಮುದಾಯದ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ.
ಕಳೆದ ತಿಂಗಳು ಸಚಿವರೊಬ್ಬರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದರು. ಅವರೊಂದಿಗೆ ಸಮಾಲೋಚನೆಯ ಸಮಯದಲ್ಲಿ ವಿದ್ಯಾರ್ಥಿವೇತನದ ವಿಷಯವನ್ನು ಪ್ರಸ್ತಾಪಿಸಿದ್ದೆವು. ಈ ವೇಳೆ ಶೀಘ್ರದಲ್ಲೇ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು.
ನಂತರ ವಿದ್ಯಾರ್ಥಿ ಸಂಘದವರು ಹಲವು ಬಾರಿ ಮನವಿ ಮಾಡಿದರೂ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಸ್ಕಾಲರ್‌ಶಿಪ್ ನೀಡದಿದ್ದರೆ ಶೀಘ್ರ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



