ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ
1978ರಲ್ಲಿ ಮೊದಲ ಬಾರಿಗೆ ಹಾನಗಲ್ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾದ ಮನೋಹರ್ ತಹಶೀಲ್ದಾರ್ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದರು.

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನರಾಗಿದ್ದಾರೆ. ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇತ್ತೀಚಿಗೆ ಸಂಸದ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದರು. ಇಂದು ಮಧ್ಯಾಹ್ನ ಮೃತದೇಹವನ್ನು ಹಾನಗಲ್ ಎನ್‌ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನ ಮನೋಹರ್ ತಹಶೀಲ್ದಾರ್ ಅಗಲಿದ್ದಾರೆ.
ಬಲಿಜ ಸಮುದಾಯಕ್ಕೆ ಸೇರಿದ್ದ ತಹಶೀಲ್ದಾರ್ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಹಿಂದೆ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 1978ರಲ್ಲಿ ಮೊದಲ ಬಾರಿಗೆ ಹಾನಗಲ್ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾದ ಮನೋಹರ್ ತಹಶೀಲ್ದಾರ್ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



