ಇನ್ಫೋಸಿಸ್ ಸಂಸ್ಥೆಗೆ ಕರ್ನಾಟಕ ಐಟಿ ರತ್ನ ಪ್ರಶಸ್ತಿ
ಅತ್ಯುತ್ತಮ ಸಾಧನೆ ಮಾಡಿರುವ ಇನ್ಫೋಸಿಸ್ ಕಂಪನಿಗೆ 'ಕರ್ನಾಟಕದ ಐಟಿ ರತ್ನ', ಅತ್ಯುತ್ತಮ ಐಟಿ ರಫ್ತು ಕಂಪನಿಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ರಾಬರ್ಟ್ ಬಾಷ್, ಇಂಟೆಲ್ ಮುಂತಾದ ಕಂಪನಿಗಳಿಗೆ ಎಸ್.ಟಿ.ಪಿ.ಐ-ಐಟಿ ಪ್ರಶಸ್ತಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರದಾನ ಮಾಡಿದರು.

ಬೆಂಗಳೂರು: ಬೆಂಗಳೂರು ಟೆಕ್ ಶೃಂಗಸಭೆಯ 27 ನೇ ಆವೃತ್ತಿಯಲ್ಲಿ ಇನ್ಫೋಸಿಸ್ ಕರ್ನಾಟಕ ಐಟಿ ರತ್ನ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಐಟಿ ರತ್ನ ಪ್ರಶಸ್ತಿಯನ್ನು ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್‌ಟಿಪಿಐ) ನೀಡುತ್ತದೆ ಮತ್ತು ರಫ್ತುಗಳಲ್ಲಿ 10,000 ಕೋಟಿ ರೂ.ಗಿಂತ ಹೆಚ್ಚು ಕ್ಲಿಕ್ ಮಾಡಿದ ಕಂಪನಿಗಳಿಗೆ ನೀಡಲಾಗುತ್ತದೆ.
ಅತ್ಯುತ್ತಮ ಸಾಧನೆ ಮಾಡಿರುವ ಇನ್ಫೋಸಿಸ್ ಕಂಪನಿಗೆ 'ಕರ್ನಾಟಕದ ಐಟಿ ರತ್ನ', ಅತ್ಯುತ್ತಮ ಐಟಿ ರಫ್ತು ಕಂಪನಿಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ರಾಬರ್ಟ್ ಬಾಷ್, ಇಂಟೆಲ್ ಮುಂತಾದ ಕಂಪನಿಗಳಿಗೆ ಎಸ್.ಟಿ.ಪಿ.ಐ-ಐಟಿ ಪ್ರಶಸ್ತಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರದಾನ ಮಾಡಿದರು. ಅಮೆಜಾನ್ ಡೆವಲಪ್ಮೆಂಟ್ ಸೆಂಟರ್, ಜೆ.ಪಿ.ಮಾರ್ಗನ್ ಸರ್ವೀಸಸ್, ಗೋಲ್ಡನ್ ಸ್ಯಾಕ್ಸ್, ಸ್ಯಾಮ್ಸಂಗ್ ಆರ್ ಆ್ಯಡ್ ಡಿ, ಕ್ವಾಲ್ಕಾಂ ಇಂಡಿಯಾ, ಸ್ನೀಡರ್ ಎಲೆಕ್ಟ್ರಿಕ್, ಅಲ್ಟ್ರಾನ್ ಟೆಕ್ ಇಂಡಿಯಾ, ಸ್ಯಾಪ್ ಲ್ಯಾಬ್ಸ್, ವಿಎಂವೇರ್ ಸಾಫ್ಟ್ವೇರ್ಸ್, ಆಕ್ಸೆಂಚರ್ ಸೊಲ್ಯೂಷನ್ಸ್ ಪರವಾಗಿ ಸಂಸ್ಥೆಗಳ ಉನ್ನತಾಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿದರು.
ಬಳಿಕ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, "ಉದ್ಯಮಿಗಳು ಕೇವಲ ವಾಣಿಜ್ಯ ದೃಷ್ಟಿಯ ಲಾಭವನ್ನು ಮಾತ್ರ ನೋಡುತ್ತಿರುವುದಿಲ್ಲ. ತಮ್ಮ ಪರಿಶ್ರಮ ಮತ್ತು ಬದ್ಧತೆಗಳ ಮೂಲಕ ತಂತ್ರಜ್ಞಾನದ ಭವಿಷ್ಯವನ್ನು ಕೂಡ ನಿರ್ಧರಿಸುತ್ತಾರೆ. ಇದರ ಲಾಭ ಕೊನೆಗೆ ಸಮಾಜಕ್ಕೆ ಸಿಗುತ್ತದೆ. ರಾಜ್ಯದಲ್ಲಿ ನೆಲೆಯೂರಿರುವ ಮಾಹಿತಿ ತಂತ್ರಜ್ಞಾನ ವಲಯದ ಕಂಪನಿಗಳು ಈ ನಿಟ್ಟಿನಲ್ಲಿ ಶ್ಲಾಘನೀಯ ಕೆಲಸ ಮಾಡುತ್ತಿವೆ ಎಂದು ಅಭಿಪ್ರಾಯಪಟ್ಟರು. ಎಸ್.ಟಿ.ಪಿ.ಐ. ಏಳು ವರ್ಷಗಳ ಹಿಂದೆಯೇ ರಾಜ್ಯ ಸರಕಾರದ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ಸ್ಮಾರ್ಟ್(ಸೆಮಿಕಂಡಕ್ಟರ್ ಮೆಷರ್ಮೆಂಟ್ ಅನಾಲಿಸಿಸ್ ಆ್ಯಡ್ ರಿಲಾಯಬಿಲಿಟಿ ಟೆಸ್ಟ್) ತೆರೆದಿದೆ. ಇದರಿಂದ ದೇಶದ ಸೆಮಿಕಂಡಕ್ಟರ್ ಮತ್ತು ಇಎಸ್ಡಿಎಂ ವಲಯಗಳ ಕಾರ್ಯ ಪರಿಸರ ಸುಧಾರಿಸಿದೆ. ಜೊತೆಗೆ ನವೋದ್ಯಮಗಳು ಮತ್ತು ಸೆಮಿಕಂಡಕ್ಟರ್ ಕಂಪನಿಗಳು ವಿನ್ಯಾಸವನ್ನು ರೂಪಿಸಲು ತೆಗೆದುಕೊಳ್ಳುತ್ತಿದ್ದ ದೀರ್ಘ ಸಮಯಕ್ಕೆ ತೆರೆ ಬಿದ್ದಿದೆ" ಎಂದು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



