ರಾಜ್ಯ

Lokayukta Raid: ರಾಜ್ಯಾದ್ಯಂತ 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ; ಭ್ರಷ್ಟರ ಬೇಟೆಯಾಡಿದ ಲೋಕಾಯುಕ್ತ ಪೊಲೀಸರು

ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

Lokayukta Raid: ರಾಜ್ಯಾದ್ಯಂತ 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ; ಭ್ರಷ್ಟರ ಬೇಟೆಯಾಡಿದ ಲೋಕಾಯುಕ್ತ ಪೊಲೀಸರು
Published On :

ಬೆಂಗಳೂರು: ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ ಸುಮಾರು 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಠ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಮುಖ ನಾಲ್ವರು ಅಧಿಕಾರಿಗಳ ಕಚೇರಿ ಹಾಗೂ ನಿವಾಸದಲ್ಲಿ ಶೋಧ ನಡೆಸುತ್ತಿದ್ದಾರೆ.

ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಬೆಂಗಳೂರಿನ ಟೌನ್ ಅಂಡ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ, ಬೆಂಗಳೂರಿನಲ್ಲಿ ಅಬಕಾರಿ ಇಲಾಖೆಯ ಎಸ್​ಪಿ ಮಹೇಶ್ ಮನೆ ಮೇಲೆ‌ ದಾಳಿ ಮಾಡಲಾಗಿದೆ. ಈ ನಾಲ್ವರು ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್ ಕೊಟ್ಟಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ದಾಳಿ ವೇಳೆ ವಶಪಡಿಸಿಕೊಂಡ ಚಿನ್ನ ಬೆಳ್ಳಿ ಆಭರಣಗಳು
ದಾಳಿ ವೇಳೆ ವಶಪಡಿಸಿಕೊಂಡ ಚಿನ್ನ ಬೆಳ್ಳಿ ಆಭರಣಗಳು

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಅವರ ಮಂಗಳೂರಿನ ವೆಲೆನ್ಸಿಯಾದ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೃಷ್ಣವೇಣಿ 2 ತಿಂಗಳ ಹಿಂದಷ್ಟೇ ವರ್ಗಾವಣೆ ಆಗಿ ಮಂಗಳೂರಿಗೆ ಬಂದಿದ್ದಾರೆ.

ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ‌ ಇಲಾಖೆ ಅಧಿಕಾರಿಯಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ಕೃಷ್ಣವೇಣಿ ವಿರುದ್ಧ ದೂರು ದಾಖಲಾದ ಹಿನ್ನೆಲೆ ಈ ದಾಳಿ ನಡೆದಿದೆ. ಮಂಗಳೂರು ಲೋಕಾಯುಕ್ತ ಎಸ್​ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಚಿಕ್ಕಬಳ್ಳಾಪುರ ಸೇರಿದಂತೆ 25 ಕಡೆಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ನಗದು ಹಾಗೂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಸೇರಿದಂತೆ 25 ಕಡೆಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ನಗದು ಹಾಗೂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಕಾವೇರಿ ನೀರಾವರಿ ನಿಗಮ ಎಂಡಿ ಮನೆ ಮೇಲೆ ಲೋಕಾ ದಾಳಿ

ಮಂಡ್ಯದಲ್ಲಿ ‌ಲೋಕಾಯುಕ್ತ ಎಸ್​ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.

ಆರೋಪಿಗಳ ಒಟ್ಟು 25 ನಿವೇಶನಗಳ ಮೇಲೆ ದಾಳಿ ನಡೆಸಲಾಗಿದ್ದು, ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಬೆಳ್ಳಿ, ಚಿನ್ನ ಹಾಗೂ ಇತರೆ ವಸ್ತುಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ದಾಳಿ ಪೂರ್ಣಗೊಂಡ ಬಳಿಕ ಆರೋಪಿಗಳ ಬಳಿ ಇರುವ ಒಟ್ಟು ಆಸ್ತಿಮೌಲ್ಯ ಎಷ್ಟು ಎಂದು ಗೊತ್ತಾಗಲಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.