ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ: ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ಆರೋಗ್ಯ ಇಲಾಖೆಯಲ್ಲಿ ಹಣದ ಕೊರತೆ ಎದುರಾಗಿದ್ದು, ಔಷಧ ಖರೀದಿಸಲು ಹಾಗೂ ಆಸ್ಪತ್ರೆ ಮೂಲಸೌಕರ್ಯ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರವು ಸೇವಾ ಶುಲ್ಕವನ್ನು ಹೆಚ್ಚಿಸಿದೆ.

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.
ಆರ್.ಅಶೋಕ್ ಅವರು ಗುರುವಾರ ಸಂಜಯ್ ಗಾಂಧಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಒದಗಿಸುವ ಸೇವೆಯನ್ನು ಪರಿಶೀಲಿಸಿದರು.
ಇದೇ ವೇಳೆ ಆಸ್ಪತ್ರೆಯಲ್ಲಿನ ಚಿಕಿತ್ಸೆ ಮತ್ತು ಸೌಲಭ್ಯಗಳ ಗುಣಮಟ್ಟವನ್ನು ಅರ್ಥಮಾಡಿಕೊಳ್ಳಲು ರೋಗಿಗಳು ಮತ್ತು ಅವರ ಜೊತೆಗಿದ್ದ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಕೆಲವರು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕವನ್ನು ಹೆಚ್ಚಳವಾಗಿರುವ ಕುರಿತು ಬೇಸರ ವ್ಯಕ್ತಪಡಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರ ಆರೋಗ್ಯ ಮತ್ತು ಶಿಕ್ಷಣದಂತಹ ಅಗತ್ಯ ಕ್ಷೇತ್ರಗಳನ್ನು ನಿರ್ಲಕ್ಷಿಸಿದೆ. ಆರೋಗ್ಯ ಇಲಾಖೆಯಲ್ಲಿ ಹಣದ ಕೊರತೆ ಎದುರಾಗಿದ್ದು, ಔಷಧ ಖರೀದಿಸಲು ಹಾಗೂ ಆಸ್ಪತ್ರೆ ಮೂಲಸೌಕರ್ಯ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರವು ಸೇವಾ ಶುಲ್ಕವನ್ನು ಹೆಚ್ಚಿಸಿದೆ, ಇದರಿಂದ ರೋಗಿಗಳಿಗೆ ಹೊರೆಯಾಗಿದೆ. ಇದರಿಂದ ರಾಜ್ಯದ ಖಜಾನೆ ಖಾಲಿಯಾಗಿದೆ ಎಂಬುದು ಸಾಬೀತಾಗುತ್ತಿದೆ. ಗ್ಯಾರಂಟಿ ನೀಡಿ ಸರ್ಕಾರ ಹೆಚ್ಚಿನ ತೆರಿಗೆ ಪಡೆಯುತ್ತಿದೆ ಎಂದು ಆರೋಪಿಸಿದರು.
ಕೈಗೆಟಕುವ ದರದ ಆರೋಗ್ಯ ಮತ್ತು ಕಲ್ಯಾಣದ ಭರವಸೆಗಳನ್ನು ಈಡೇರಿಸುವಲ್ಲಿ ಅವರ ಸರ್ಕಾರ ವಿಫಲವಾಗಿದೆ. ಆಹಾರ ಮತ್ತು ಆರೋಗ್ಯದ ವಿಷಯದಲ್ಲಿ ಅವರು ಜನರನ್ನು ವಂಚಿಸುತ್ತಿದ್ದಾರೆ. ಒಂದೆಡೆ ಭೂಮಿ, ಮತ್ತೊಂದೆಡೆ ಪಡಿತರ ಚೀಟಿ ಕಿಸಿಯುತ್ತಿದ್ದಾರೆ. ಇದೀಗ ಆರೋಗ್ಯ ಸೇವೆಯೂ ಸಿಗುತ್ತಿಲ್ಲ. ಬಡ ಸರ್ಕಾರ ಎಂದರೆ ಇದೇನಾ? ಎಂದು ಪ್ರಶ್ನಿಸಿದರು.
ವಿಧಾನಸೌಧಕ್ಕೆ ಪ್ರವೇಶ ಪಡೆಯಲು ಲಂಚ ಅಗತ್ಯವಾಗಿದೆ ಹೋಗಿದೆ, ಮುಡಾ ಹಗರಣದ ನಂತರ ಸರ್ಕಾರದ ಗಮನ ಜನಪರವಾಗಿಲ್ಲ. ಆರೋಗ್ಯ ಸೇವೆಯು ಉಚಿತವಾಗಿರಬೇಕು. ಆದರೆ, ಸರ್ಕಾರ ಬಡವರ ಮೇಲೆ ಹೊರೆ ಹೊರಿಸುವ ಧೋರಣೆಯನ್ನು ಅಳವಡಿಸಿಕೊಂಡಿದೆ ಎಂದು ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



