ಪುತ್ತೂರು: ಸರಣಿ ಅಪಘಾತ: 20 ಜನರಿಗೆ ಗಾಯ, ಹಲವು ವಾಹನಗಳು ಜಖಂ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್, ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ.

ದಕ್ಷಿಣ ಕನ್ನಡ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವು ವಾಹನಗಳು ಜಖಂಗೊಂಡಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್, ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.
ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಖಾಸಗಿ ಬಸ್ನಲ್ಲಿ ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದರು. ಮರಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಕಾರು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆಯುವ ಮೂಲಕ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದ್ದು, ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ರವಾನಿಸಲಾಗಿದೆ. ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



