ರಾಜ್ಯ

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ ಫಲಿತಾಂಶ: ಅಭ್ಯರ್ಥಿಗಳ ಎದೆಬಡಿತ ಹೆಚ್ಚಳ, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ

ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಕೂಟ ಗೆಲ್ಲುವ ಸಾಧ್ಯತೆಯಿದೆ. ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದೆ.

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ ಫಲಿತಾಂಶ: ಅಭ್ಯರ್ಥಿಗಳ ಎದೆಬಡಿತ ಹೆಚ್ಚಳ, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ
ಚುನಾವಣಾಧಿಕಾರಿಗಳು.
Published On :

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಳ್ಳಲಿದ್ದು, ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ.

ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಕೂಟ ಗೆಲ್ಲುವ ಸಾಧ್ಯತೆಯಿದೆ. ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದೆ.

ಸಂಡೂರಿನಲ್ಲಿ ಎನ್'ಡಿಎ ಅಭ್ಯರ್ಥಿಯಾಗಿ ಬಂಗಾರು ಹನುಮತು, ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ ಅವರು ಕಣದಲ್ಲಿದ್ದಾರೆ.ಚನ್ಪಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ.ಯೋಗೇಶ್ವರ್, ಎನ್'ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಮತ್ತು ಶಿಗ್ಗಾಂವಿ ಕ್ಷೇತ್ರದಲ್ಲಿ ಎನ್'ಡಿಎ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸೇರಿ ಒಟ್ಟು 45 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.