ವಾಲ್ಮೀಕಿ ನಿಗಮ ಹಗರಣ: ತನಿಖೆ ವಿವರ ಸಲ್ಲಿಸಿ; CBIಗೆ ಹೈಕೋರ್ಟ್ ಸೂಚನೆ
ಹಗರಣದ ತ್ವರಿತ ಸಿಬಿಐ ತನಿಖೆಗೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿರುವ ಎಫ್‌ಐಆರ್ ಅನುಸಾರ ಈವರೆಗೂ ನಡೆಸಲಾಗಿರುವ ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸಿ ಎಂದು ಹೈಕೋರ್ಟ್, ಸಿಬಿಐಗೆ ಸೂಚನೆ ನೀಡಿದೆ.
ಹಗರಣದ ತ್ವರಿತ ಸಿಬಿಐ ತನಿಖೆಗೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶುಕ್ರವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಸಿಬಿಐ ತನಿಖೆಯನ್ನು ಹೈಕೋರ್ಟ್ ನಿಗಾದಲ್ಲಿಯೇ ನಡೆಸಬೇಕು. ಪ್ರತಿ 15 ದಿನಗಳಿಗೊಮ್ಮೆ ಸಿಬಿಐ ತನಿಖೆಯ ಪ್ರಗತಿ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕು ಮತ್ತು ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ, ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್ ಅವರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



