ರಾಜ್ಯ

ಫೋನ್ ಪೇ ಮೂಲಕ ಲಂಚ ಪಡೆದ ಆರೋಪ: 3 ಅಧಿಕಾರಿಗಳ ವಿರುದ್ದ FIR ದಾಖಲು

ಎಚ್.ಡಿ.ಕೋಟೆ ತಾಲೂಕಿನ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ಕಂದಾಯ ನಿರೀಕ್ಷಕ ಗೋವಿಂದರಾಜು, ಎನ್.ಬೆಳತ್ತೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ.

ಫೋನ್ ಪೇ ಮೂಲಕ ಲಂಚ ಪಡೆದ ಆರೋಪ: 3 ಅಧಿಕಾರಿಗಳ ವಿರುದ್ದ FIR ದಾಖಲು
ಸಂಗ್ರಹ ಚಿತ್ರ
Published On :

ಮೈಸೂರು: ‘ಫೋನ್‌ಪೇ’ ಮೂಲಕ ಲಂಚ ಪಡೆದ ಆರೋಪದ ಮೇಲೆ ಮೂವರು ಕಂದಾಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಎಚ್.ಡಿ.ಕೋಟೆ ತಾಲೂಕಿನ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ಕಂದಾಯ ನಿರೀಕ್ಷಕ ಗೋವಿಂದರಾಜು, ಎನ್.ಬೆಳತ್ತೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ.

ಎಚ್.ಡಿ.ಕೋಟೆಯ ಬಿ.ವಿ.ಮಮತಾ ಕುಮಾರಿ ಅವರ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಭಾನುವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಗುಂಡತ್ತೂರು ಗ್ರಾಮದ ಸರ್ವೆ ನಂ.10ರ 5 ಎಕರೆ 1 ಗುಂಟೆ ಭೂಮಿಯನ್ನು ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅಧಿಕಾರಿಗಳು ಆಸ್ತಿ ಪರಭಾರೆ ಮಾಡಿದ್ದರು. ಬಳಿಕ ಆಸ್ತಿ ಹಂಚಿಕೆ ಮಾಡಿ ಮಾರಾಟ ಮಾಡಲು ಹಾಗೂ ಹಿಂದಿನಂತೆ ದಾಖಲೆಗಳನ್ನು ಯಥಾಸ್ಥಿತಿ ಕಾಪಾಡಿಕೊಳ್ಳಲು ಲಂಚಕ್ಕೆ ಬೇಡಿಕೆಯನ್ನಿಟ್ಟಿದ್ದರು. ಈ ವಿಚಾರವಾಗಿ ಮೊದಲ ಹಂತದಲ್ಲಿ 5 ಸಾವಿರ ಫೋನ್‌ ಪೇ ಮೂಲಕ ಲಂಚ ಪಡೆದು ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.