ಮುಡಾ ಪ್ರಕರಣ: ಡಿಸೆಂಬರ್ 10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಲೋಕಾಯುಕ್ತ ತನಿಖೆಯ ವಿಶ್ವಾಸಾರ್ಹತೆ ಬಗ್ಗೆ ಅನುಮಾನಗೊಂಡು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಮುಡಾದ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ ಮಂಗಳವಾರ ಮುಂದೂಡಿದೆ.
ಈ ವಿಷಯದಲ್ಲಿ ಲೋಕಾಯುಕ್ತ ತನಿಖೆಯ ವಿಶ್ವಾಸಾರ್ಹತೆ ಬಗ್ಗೆ ಅನುಮಾನಗೊಂಡು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಲೋಕಾಯುಕ್ತ ಪೊಲೀಸರಲ್ಲಿ ನಂಬಿಕೆ ಇಲ್ಲದ ಕಾರಣ, ಸಿಬಿಐ ತನಿಖೆಗೆ ವಹಿಸಬೇಕು ಎಂದು ಹೈಕೋರ್ಟ್ ಮೊರೆ ಹೋಗಿರುವುದಾಗಿ ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ "ಸ್ವಾಧೀನಪಡಿಸಿಕೊಂಡ" ಭೂಮಿಗೆ ಪರ್ಯಾಯವಾಗಿ ಮೈಸೂರಿನ ಉನ್ನತ ಮಾರುಕಟ್ಟೆ ಪ್ರದೇಶದಲ್ಲಿ (ವಿಜಯನಗರ ಲೇಔಟ್ 3 ಮತ್ತು 4ನೇ ಹಂತ) 14 ಪರಿಹಾರ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮುಡಾ ಪಾರ್ವತಿ ಅವರಿಗೆ 50:50 ಅನುಪಾತದ ಯೋಜನೆಯಡಿ ಅವರ 3.16 ಎಕರೆ ಜಮೀನಿಗೆ ಬದಲಾಗಿ ನಿವೇಶನಗಳನ್ನು ಮಂಜೂರು ಮಾಡಿತ್ತು. ಅಲ್ಲಿ ಅದು ವಸತಿ ಬಡಾವಣೆಯನ್ನು ಅಭಿವೃದ್ಧಿಪಡಿಸಿತ್ತು.
ವಿವಾದಾತ್ಮಕ ಯೋಜನೆಯಡಿಯಲ್ಲಿ, ವಸತಿ ಬಡಾವಣೆಗಳನ್ನು ರೂಪಿಸಲು ಅವರಿಂದ ಸ್ವಾಧೀನಪಡಿಸಿಕೊಂಡಿರುವ ಅಭಿವೃದ್ಧಿಯಾಗದ ಭೂಮಿಗೆ ಬದಲಾಗಿ ಭೂಮಿ ಕಳೆದುಕೊಳ್ಳುವವರಿಗೆ ಮುಡಾ ಅಭಿವೃದ್ಧಿ ಹೊಂದಿದ ಭೂಮಿಯಲ್ಲಿ 50 ಪ್ರತಿಶತವನ್ನು ಮಂಜೂರು ಮಾಡಿದೆ. ಮೈಸೂರು ತಾಲೂಕಿನ ಕಸಬಾ ಹೋಬಳಿಯ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿನ ಈ 3.16 ಎಕರೆ ಜಮೀನಿನಲ್ಲಿ ಪಾರ್ವತಿ ಅವರಿಗೆ ಯಾವುದೇ ಕಾನೂನು ಬದ್ಧ ಹಕ್ಕು ಇಲ್ಲ ಎಂದು ಆರೋಪಿಸಲಾಗಿದೆ.
ಕರ್ನಾಟಕ ಲೋಕಾಯುಕ್ತ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯ ‘ಹಗರಣ’ದ ತನಿಖೆ ಆರಂಭಿಸಿದೆ. ಹಗರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



