ಸಮುದಾಯಕ್ಕೆ 2ಎ ಮೀಸಲಾತಿ; ಡಿಸೆಂಬರ್ 10 ರಂದು ಸುವರ್ಣಸೌಧದ ಹೊರಗೆ ಪ್ರತಿಭಟನೆ- ಬಸವಜಯ ಮೃತ್ಯುಂಜಯ ಸ್ವಾಮೀಜಿ
ಸುವರ್ಣಸೌಧದ ಎದುರು ಲಕ್ಷಾಂತರ ಪಂಚಮಸಾಲಿಗಳು ಅನೇಕ ವಕೀಲರ ನೇತೃತ್ವದಲ್ಲಿ ಜಮಾಯಿಸಿ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆ.

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಮೀಸಲಾತಿ ನೀಡಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸದ ಕಾರಣ ಡಿ.10 ರಂದು ಬೆಳಗಾವಿಯ ಸುವರ್ಣಸೌಧದ ಹೊರಗೆ ಪ್ರತಿಭಟನೆ ನಡೆಸಲಾಗುವುದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಂಗಳವಾರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುವರ್ಣಸೌಧದ ಎದುರು ಲಕ್ಷಾಂತರ ಪಂಚಮಸಾಲಿಗಳು ಅನೇಕ ವಕೀಲರ ನೇತೃತ್ವದಲ್ಲಿ ಜಮಾಯಿಸಿ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆಂದು ಹೇಳಿದರು.
ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿಗಳು 2013ರಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ವರ್ಷಗಳಿಂದ ಪಂಚಮಸಾಲಿಗಳು ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇತ್ತೀಚೆಗೆ ಪಂಚಮಸಾಲಿ ಮುಖಂಡರ ಜೊತೆ ಸಿದ್ದರಾಮಯ್ಯ ಚರ್ಚಿಸಿದರೂ ಅವರ ಮನವಿಗೆ ಸ್ಪಂದಿಸಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಪಂಚಮಸಾಲಿಗಳು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿಸಿದರು.
ಇದೇ ವೇಳೆ ಬೆಳಗಾವಿಯಲ್ಲಿ ನಡೆಯಲಿರುವ ಪ್ರತಿಭಟನೆಗೆ ರಾಜ್ಯ ಸರ್ಕಾರ ಅಡ್ಡಿಪಡಿಸುವಂತಿಲ್ಲ. ಅಡ್ಡಿಪಡಿಸಿದ್ದೇ ಆದರೆ, ಪ್ರತಿಭಟನೆ ವಿಕೋಪಕಕೆ ಹೋಗಲಿದೆ ಎಚ್ಚರಿಸಿದರು. ಅಲ್ಲದೆ, ಪ್ರತಿಭಟನೆಗಾಗಿ ಸುವರ್ಣಸೌಧದ ಬಳಿ 5,000 ಟ್ರ್ಯಾಕ್ಟರ್‌ಗಳನ್ನು ತರಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



