ATM ಹೊತ್ತೊಯ್ದರೂ ಸಿಗದ ಹಣ: ನೀಲಗಿರಿ ತೋಪಿನಲ್ಲಿ ಯಂತ್ರ ಬಿಟ್ಟು ಕಳ್ಳರು ಪರಾರಿ..!
ಸೋಮವಾರ ಬೆಳಿಗ್ಗೆ ಕೆನರಾ ಬ್ಯಾಂಕ್ ಎಟಿಎಂಗೆ ಬಂದಿರುವ ಇಬ್ಬರು ದುಷ್ಕರ್ಮಿಗಳು, ಎಟಿಎಂನಲ್ಲಿದ್ದ ಹಣ ದೋಚಲು ಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗದಿದ್ದಾಗ ಎಟಿಎಂ ಯಂತ್ರವನ್ನೇ ಹೊತ್ತೊಯ್ದಿದ್ದಾರೆ.

ಬೆಂಗಳೂರು: ಎಟಿಎಂನಿಂದ ಹಣ ದೋಚಲು ಯತ್ನಿಸಿ ವಿಫಲವಾದ ದುಷ್ಕರ್ಮಿಗಳು, ನಂತರ ಎಟಿಎಂ ಯಂತ್ರವನ್ನೇ ಹೊತ್ಯೊಯ್ದಿರುವ ಘಟನೆ ಅತ್ತಿಬೆಲೆ ಠಾಣಾ ವ್ಯಾಪ್ತಿಯ ವಡ್ಡರ ಪಾಳ್ಯದಲ್ಲಿ ಸೋಮವಾರ ನಡೆದಿದೆ.
ಸೋಮವಾರ ಬೆಳಿಗ್ಗೆ ಕೆನರಾ ಬ್ಯಾಂಕ್ ಎಟಿಎಂಗೆ ಬಂದಿರುವ ಇಬ್ಬರು ದುಷ್ಕರ್ಮಿಗಳು, ಎಟಿಎಂನಲ್ಲಿದ್ದ ಹಣ ದೋಚಲು ಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗದಿದ್ದಾಗ ಎಟಿಎಂ ಯಂತ್ರವನ್ನೇ ಹೊತ್ತೊಯ್ದಿದ್ದಾರೆ. ಈ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ.
ಸ್ಥಳದಿಂದ ಯಂತ್ರದೊಂದಿಗೆ ತೆರಳಿರುವ ಕಳ್ಳರು, ಜನ ಸಂಚಾರ ಕಡಿಮೆ ಇದ್ದ ಮಂಚನಹಳ್ಳಿ ಸಮೀಪದ ನೀಲಗಿರಿ ತೋಪಿಗೆ ಬಂದು ಆಕ್ಸಲ್ ಬ್ಲೇಡ್ ನಿಂದ ಯಂತ್ರವನ್ನು ತುಂಡರಿಸಲು ಹಣ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಆದರೆ, ಅದು ವಿಫಲವಾಗಿದೆ. ಈ ನಡುವೆ ಬೆಳಿಗ್ಗೆ ಜನ ಸಂಚಾರ ಆರಂಭವಾದ ಕಾರಣ ಭಯಭೀತರಾಗಿ ಯಂತ್ರವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಎಟಿಎಂ ಯಂತ್ರದಲ್ಲಿ 10 ಲಕ್ಷಕ್ಕೂ ಹೆಚ್ಚು ಹಣವಿತ್ತೆಂದು ತಿಳಿದುಬಂದಿದೆ. ಸ್ಥಳೀಯ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದೀಗ ಆರೋಪಿಗಳ ಸುಳಿವು ಸಂಗ್ರಹಿಸಲು ಪೊಲೀಸರು ಕಿಯೋಸ್ಕ್‌ನೊಳಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಗಳ ಚಲನವಲನಗಳನ್ನು ಪತ್ತೆಹಚ್ಚಲು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನೂ ಕೂಡ ಪರಿಶೀಲಿಸುತ್ತಿದ್ದಾರೆ.
ಘಟನೆಯಲ್ಲಿ ತಮಿಳುನಾಡಿನ ಗ್ಯಾಂಗ್ ಶಾಮೀಲಾಗಿರುವುದನ್ನು ತಳ್ಳಿಹಾಕುವಂತಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



