15 ನಿಮಿಷದ ಮಾರ್ಗ, ಕ್ರಮಿಸಲು ಬೇಕು 90 ನಿಮಿಷ: BWSSB ಗೆ ಜನತೆ ಹಿಡಿಶಾಪ
ಗ್ರಾಮಗಳಿಗೆ ಕುಡಿಯುವ ನೀರು ಹಾಗೂ ಒಳಚರಂಡಿ ಮಾರ್ಗಗಳ ಒದಗಿಸಲು ನಿರ್ಧರಿಸಲಾಗಿದೆ. ಹೀಗಾಗಿ ಕಾಮಗಾರಿ ನಡೆಯುತ್ತಿದ್ದು, ಸಮಸ್ಯೆ ಎದುರಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಗೇರ್ ಸ್ಕೂಲ್ ರಸ್ತೆಯಲ್ಲಿ ಒಳಚರಂಡಿ ಮಾರ್ಗಗಳನ್ನು ಅಳವಡಿಸಲು 80 ಅಡಿ ರಸ್ತೆಯನ್ನು ಅಗೆದಿದ್ದು, ಇದರ ಪರಿಣಾಮ ವೈಟ್‌ಫೀಲ್ಡ್ ಮತ್ತು ಸುತ್ತಮುತ್ತಲಿನ ನಿವಾಸಿಗಳು ಭಾರೀ ಸಂಚಾರ ದಟ್ಟಣೆ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.
15 ನಿಮಿಷಗಳಲ್ಲಿ ಸಂಚರಿಸಬಹುದಾದ ರಸ್ತೆಯಲ್ಲಿ ಇಂದು 1 ರಿಂದ 1.5 ಗಂಟೆಗಳ ಸಮಯವಾಗುತ್ತಿದೆ. ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ ಎಂದು ಸ್ಥಳೀಯ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
GEAR ಸ್ಕೂಲ್ ರಸ್ತೆಯಲ್ಲಿ ಬಿಡಬ್ಲ್ಯೂಎಸ್‌ಎಸ್‌ಬಿ ಕಾಮಗಾರಿ ಕಳೆದ ಎಂಟು ತಿಂಗಳಿನಿಂದಲೂ ನಡೆಯುತ್ತಿದೆ. ರಸ್ತೆಯ ತುಂಬ ಧೂಳು ತುಂಬಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ಈ ರಸ್ತೆಯಲ್ಲಿ 5 ಶಾಲೆಗಳಿದ್ದು, ಫ್ಲಿಪ್‌ಕಾರ್ಟ್, ಇಂಟೆಲ್, ಇಎಕ್ಸ್‌ಎಲ್‌ನಂತಹ ಐಟಿ ಕಂಪನಿಗಳ ಕಚೇರಿಗಳಿವೆ. ಬಿಡಬ್ಲ್ಯುಎಸ್‌ಎಸ್‌ಬಿ ಕಾಮಗಾರಿಯಿಂದಾಗಿ ಈ ರಸ್ತೆಯಲ್ಲಿ ಪ್ರತಿನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಮಕ್ಕಳು ಮತ್ತು ಕಚೇರಿಗೆ ಹೋಗುವವರು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆಂದು ಹೇಳಿದ್ದಾರೆ.
ಇದು ಬಿಡಬ್ಲ್ಯುಎಸ್‌ಎಸ್‌ಬಿ ಮತ್ತು ಬಿಬಿಎಂಪಿಯ ಅಸಮರ್ಥ ನಿರ್ವಹಣೆಯಾಗಿದೆ. ಯಾವುದೇ ಚುನಾಯಿತ ಪ್ರತಿನಿಧಿಗಳು ಕಾಳಜಿ ತೋರುತ್ತಿಲ್ಲ ಎಂದು ನಿವಾಸಿ ಅಶೋಕ್ ಮೃತ್ಯುಂಜಯ ಅವರು ಹೇಳಿದ್ದಾರೆ.
ಕಾವೇರಿ 5 ಹಂತ ಯೋಜನೆಯಲ್ಲಿರುವ ಬಿಡಬ್ಲ್ಯುಎಸ್‌ಎಸ್‌ಬಿ ಹಿರಿಯ ಎಂಜಿನಿಯರ್ ಒಬ್ಬರು ಮಾತನಾಡಿ, ಕಳೆದ ವಾರ ಮಂಡಳಿಯು ಸಭೆ ನಡೆಸಿ ಪಾಣತ್ತೂರು, ಕರಿಯಮ್ಮನ ಅಗ್ರಹಾರದಂತಹ ಪ್ರದೇಶಗಳಿಗೆ ಒಳಚರಂಡಿ ಸಂಪರ್ಕ ಕಲ್ಪಿಸುವ ಮೂಲಕ ರಸ್ತೆಯನ್ನು ಯಥಾಸ್ಥಿತಿಗೆ ತರಲು ನಿರ್ಧರಿಸಿದೆ. ಕಾಡುಬೀಸನಹಳ್ಳಿಯಲ್ಲಿ ಈಗಾಗಲೇ ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳಿದರು.
ಡಿಲಿಮಿಟೇಶನ್ ನಂತರ ಈ ಗ್ರಾಮಗಳನ್ನು ಬಿಬಿಎಂಪಿ ವ್ಯಾಪ್ತಿಗೆ ತರಲಾಗಿದ್ದು, ಇದರ ಬೆನ್ನಲ್ಲೇ ಗ್ರಾಮಗಳಿಗೆ ಕುಡಿಯುವ ನೀರು ಹಾಗೂ ಒಳಚರಂಡಿ ಮಾರ್ಗಗಳ ಒದಗಿಸಲು ನಿರ್ಧರಿಸಲಾಗಿದೆ. ಹೀಗಾಗಿ ಕಾಮಗಾರಿ ನಡೆಯುತ್ತಿದ್ದು, ಸಮಸ್ಯೆ ಎದುರಿಸಲೇಬೇಕಿದೆ. ಒಂದು ಸಂಸ್ಥೆಗೆ ಗುತ್ತಿಗೆ ನೀಡಲಾಗಿದ್ದು, ಗುತ್ತಿಗೆದಾರರು ಡಿಸೆಂಬರ್ 2ನೇ ವಾರದಲ್ಲಿ ಕೆಲಸ ಪ್ರಾರಂಭಿಸುತ್ತಿದ್ದಾರೆ. ಒಂದು ವಾರದಲ್ಲಿ 1.5 ಕಿ.ಮೀ ವ್ಯಾಪ್ತಿಯಲ್ಲಿರುವ ರಸ್ತೆಯ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



