ವಿದ್ಯುತ್ ವ್ಯತ್ಯಯ: BMCRI ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ AC ದುರಸ್ತಿ; ಶಸ್ತ್ರಚಿಕಿತ್ಸೆಗಳು ಮುಂದೂಡಿಕೆ
ತಾಂತ್ರಿಕ ವೈಫಲ್ಯವು ಆಸ್ಪತ್ರೆಯ ಹವಾನಿಯಂತ್ರಣ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿದೆ, ಇದರಿಂದ ನಿಗದಿತ ಶಸ್ತ್ರಚಿಕಿತ್ಸೆಗಳು ತಡವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ) ಅಡಿಯಲ್ಲಿನ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್‌ಎಸ್‌ವೈ) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕೇಂದ್ರೀಕೃತ ಹವಾನಿಯಂತ್ರಿತ (ಎಸಿ) ವ್ಯವಸ್ಥೆಯಲ್ಲಿ ಸಮಸ್ಯೆಯುಂಟಾದ ಪರಿಣಾಮ ಆರೋಗ್ಯ ಸೇವೆಯಲ್ಲಿ ತೀವ್ರ ವ್ಯತ್ಯಯವಾಗಿದೆ. ತುರ್ತು ಪ್ರಕರಣ ಹೊರತುಪಡಿಸಿ ಇತರೆ ಎಲ್ಲಾ ಶಸ್ತ್ರಚಿಕಿತ್ಸೆಗಳನ್ನು ಮುಂದೂಡಲಾಗಿದೆ.
4-5 ದಿನಗಳಿಂದ ವಿದ್ಯುತ್ ಏರಿಳಿತವಾಗಿದ್ದು, ಇದರ ಪರಿಣಾಮ ಹವಾನಿಯಂತ್ರಣ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಸಮಸ್ಯೆ ಉದ್ಭವಿಸಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
BMCRI ಬೆಂಗಳೂರಿನಲ್ಲಿ ಐದು ಆಸ್ಪತ್ರೆಗಳನ್ನು (ವಿಕ್ಟೋರಿಯಾ ಆಸ್ಪತ್ರೆ (1000 ಹಾಸಿಗೆಗಳು), ವಾಣಿ ವಿಲಾಸ್ ಆಸ್ಪತ್ರೆ (500 ಹಾಸಿಗೆಗಳು), ಮಿಂಟೋ ಆಸ್ಪತ್ರೆ (300 ಹಾಸಿಗೆಗಳು), ಪಿಎಂಎಸ್‌ಎಸ್‌ವೈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (200 ಹಾಸಿಗೆಗಳು), ಮತ್ತು ಟ್ರಾಮಾ ಮತ್ತು ಎಮರ್ಜೆನ್ಸಿ ಕೇರ್ ಸೆಂಟರ್ (200 ಹಾಸಿಗೆಗಳು) ) ನಿರ್ವಹಿಸುತ್ತಿದ್ದು, ಈ ಪೈಕಿ ಪಿಎಂಎಸ್‌ಎಸ್‌ವೈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಕೇಂದ್ರೀಯ ಹವಾನಿಯಂತ್ರಿತ ವ್ಯವಸ್ಥೆಯನ್ನು ಹೊಂದಿರುವ ಏಕೈಕ ಆಸ್ಪತ್ರೆಯಾಗಿದೆ.
ಆಸ್ಪತ್ರೆಯ ವಿಶೇಷ ಅಧಿಕಾರಿ ಡಾ.ದಿವ್ಯಪ್ರಕಾಶ್ ಮಾತನಾಡಿ, ತಾಂತ್ರಿಕ ವೈಫಲ್ಯವು ಆಸ್ಪತ್ರೆಯ ಹವಾನಿಯಂತ್ರಣ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿದೆ, ಇದರಿಂದ ನಿಗದಿತ ಶಸ್ತ್ರಚಿಕಿತ್ಸೆಗಳು ತಡವಾಗಿವೆ. ಎಂದು ಹೇಳಿದ್ದಾರೆ.
"ಆಸ್ಪತ್ರೆಯ ತಾಂತ್ರಿಕ ತಂಡವು ಸಮಸ್ಯೆಯನ್ನು ಪರಿಹರಿಸಲು ಕಾರ್ಯನಿರ್ವಹಿಸುತ್ತಿದ್ದು, ಶೀಘ್ರದಲ್ಲೇ ಹವಾನಿಯಂತ್ರಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪುನಃಸ್ಥಾಪಸಲಿದ್ದಾರೆ. ಒಮ್ಮೆ ವ್ಯವಸ್ಥೆಯು ಕಾರ್ಯಾರಂಭಿಸಿದ ನಂತರ, ಎಲ್ಲಾ ಶಸ್ತ್ರಚಿಕಿತ್ಸೆಗಳು ನಿಗದಿತ ಸಮಯಕ್ಕೆ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.
ಭವಿಷ್ಯದಲ್ಲಿ ಈ ರೀತಿಯ ಸಮಸ್ಯೆಗಳು ಉದ್ಭವಿದಂತೆ ಮಾಡಲು ಹಲವು ಕ್ರಮಗಳನ್ನೂ ಕೂಡ ಕೈಗೊಳ್ಳಲಾಗುತ್ತಿದೆ. ಪಿಎಂಎಸ್‌ಎಸ್‌ವೈ ಆಸ್ಪತ್ರೆ ಹೊರತುಪಡಿಸಿದರೆ ಇತರೆ ಆಸ್ಪತ್ರೆಗಳಲ್ಲಿ ಯಾವುದೇ ಸಮಸ್ಯೆಗಳಾಗಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



