ಲೋಕಾಯುಕ್ತ ಪೊಲೀಸರಿಂದ ಮುಡಾ ಮಾಜಿ ಆಯುಕ್ತ ಪಿ.ಎಸ್ ಕಾಂತರಾಜು ವಿಚಾರಣೆ
ಕಾಂತರಾಜು ಅವರು ಸೆಪ್ಟೆಂಬರ್ 2017 ರಿಂದ ನವೆಂಬರ್ 2019 ರವರೆಗೆ ಎರಡು ವರ್ಷಗಳ ಕಾಲ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತರಾಗಿದ್ದರು.

ಮೈಸೂರು: ಲೋಕಾಯುಕ್ತ ಪೊಲೀಸರು ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಗುರುವಾರ ಮಾಜಿ ಆಯುಕ್ತ ಪಿ ಎಸ್ ಕಾಂತರಾಜು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಕಾಂತರಾಜು ಅವರು ಸೆಪ್ಟೆಂಬರ್ 2017 ರಿಂದ ನವೆಂಬರ್ 2019 ರವರೆಗೆ ಎರಡು ವರ್ಷಗಳ ಕಾಲ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತರಾಗಿದ್ದರು.
ಇಲ್ಲಿನ ಲೋಕಾಯುಕ್ತ ಪೊಲೀಸ್ ಕಚೇರಿಯಿಂದ ಹೊರಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಡಾ ಮಾಜಿ ಆಯುಕ್ತ ಕಾಂತರಾಜು ಅವರು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ತನಿಖಾ ಅಧಿಕಾರಿಗೆ(ಐಒ) ತಿಳಿಸಿದ್ದೇನೆ ಎಂದರು.
"2017 ರಲ್ಲಿ, ಭೂಮಿ ಕಳೆದುಕೊಳ್ಳುವವರಿಗೆ ಸಮಾನ ಪ್ರಮಾಣದ ಅಭಿವೃದ್ಧಿಯಾಗದ ಭೂಮಿಯನ್ನು ಹಿಂದಿರುಗಿಸಲು ಮಂಡಳಿಯ ಸಭೆಯಲ್ಲಿ ನಿರ್ಧರಿಸಲಾಯಿತು. ನಾವು ಡಿಸೆಂಬರ್ 2017 ರಲ್ಲಿ ಮುಡಾ ಮಂಡಳಿಯ ಸಭೆಯಲ್ಲಿ ಈ ವಿಷಯವನ್ನು ಮಂಡಿಸಿದ್ದೇವೆ. ಇದು ಮುಡಾದ ಒಮ್ಮತದ ನಿರ್ಧಾರ. ಈ ವಿಷಯದ ಬಗ್ಗೆ ತನಿಖಾಧಿಕಾರಿ ನನ್ನನ್ನು ಕೇಳಿದರು ಮತ್ತು ನಾನು ಅವರಿಗೆ ಎಲ್ಲವನ್ನೂ ವಿವರಿಸಿದ್ದೇನೆ” ಎಂದು ಕಾಂತರಾಜು ಹೇಳಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಬಿಎಂ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ಇತರರು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.
ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾ 50:50 ಅನುಪಾತದ ಯೋಜನೆಯಡಿ ಅವರ 3.16 ಎಕರೆ ಜಮೀನಿಗೆ ಬದಲಾಗಿ 14 ನಿವೇಶನಗಳನ್ನು ಮಂಜೂರು ಮಾಡಿತ್ತು. ಈ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದ ನಂತರ ಪಾರ್ವತಿ ಅವರು 12 ನಿವೇಶನಗಳನ್ನು ವಾಪಸ್ ಮುಡಾಗೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



