ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿ.ಕೆ ಶಿವಕುಮಾರ್
ಸ್ವಾಮೀಜಿಗಳು ಇಂಥ ವಿವಾದಾತ್ಮಕ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರುವುದು ಒಳಿತು.

ಬೆಂಗಳೂರು: ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರ ಶೇಖರ ಸ್ವಾಮೀಜಿ ಹೇಳಿಕೆಗೆ ಬುಧವಾರ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, 'ಸ್ವಾಮೀಜಿಗಳು ಇಂಥ ವಿವಾದಾತ್ಮಕ ಹೇಳಿಕೆ ನೀಡಬಾರದು. ಅವರು ಧಾರ್ಮಿಕ ಕೆಲಸಗಳ ಬಗ್ಗೆ ಗಮನ ಹರಿಸಬೇಕು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರುವುದು ಒಳಿತು. ಮತದಾನ ಎಂಬುದು ಸಂವಿಧಾನದ ಮೂಲಕ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಬಂದಿರುವ ಹಕ್ಕು. ಒಬ್ಬ ವ್ಯಕ್ತಿ ಜನಿಸಿದರೆ ಸಂವಿಧಾನದಿಂದ ಸಿಗುವ ಹಕ್ಕುಗಳಲ್ಲಿ ಇದು ಕೂಡ ಒಂದು' ಎಂದರು.
ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು' ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



