ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ: ವಿಚಾರಣೆಗೆ ಹಾಜರಾಗುವಂತೆ ಚಂದ್ರಶೇಖರನಾಥ ಸ್ವಾಮೀಜಿಗೆ ನೋಟಿಸ್
ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರು: 'ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಡಿಸೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚಂದ್ರಶೇಖರನಾಥ ಸ್ವಾಮೀಜಿ ಅವರು ನಮ್ಮ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಮತದಾನದ ಹಕ್ಕಿಗೆ ಕೈ ಹಾಕಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಸೈಯ್ಯದ್ ಅಬ್ಬಾಸ್ ದೂರು ನೀಡಿದ್ದರು.
ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಸ್ವಾಮೀಜಿ, 'ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು. ಬೇರೆಯವರ ಭೂಮಿಯನ್ನು ಕಸಿದುಕೊಳ್ಳುವುದು ಧರ್ಮವಲ್ಲ. ಮೊದಲು ವಕ್ಫ್ ಬೋರ್ಡ್ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದರು.
ಬಳಿಕ ವಿವಾದ ದೊಡ್ಡದಾಗುತ್ತಿದ್ದಂತೆ ಚಂದ್ರಶೇಖರನಾಥ ಸ್ವಾಮೀಜಿ ಅವರು ವಿಷಾದ ವ್ಯಕ್ತಪಡಿಸಿದ್ದರು. ಅದು ಬಾಯಿ ತಪ್ಪಿ ಆಡಿದ ಮಾತು. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



