Sexual harassment case: ಕಾಂಗ್ರೆಸ್ ಪಕ್ಷದಿಂದ ಬಿ ಗುರಪ್ಪ ನಾಯ್ಡು ಉಚ್ಛಾಟನೆ!
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಶಿಸ್ತು ಕ್ರಮ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ನಾಯ್ಡು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಹಿರಿಯ ಮುಖಂಡ ಬಿ ಗುರಪ್ಪ ನಾಯ್ಡು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಲೈಂಗಿಕ ಕಿರುಕುಳ ಮತ್ತು ಮಹಿಳೆಯೊಬ್ಬರ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಕರ್ನಾಟಕ ಕಾಂಗ್ರೆಸ್ ಮುಖಂಡ ಬಿ ಗುರಪ್ಪ ನಾಯ್ಡು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಶಿಸ್ತು ಕ್ರಮ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ನಾಯ್ಡು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.
ಗುರಪ್ಪನಾಯ್ಡು ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿರುವುದೇ ಈ ಕ್ರಮಕ್ಕೆ ಕಾರಣ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಏನಿದು ಪ್ರಕರಣ?
ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಗುರಪ್ಪನಾಯ್ಡು ಶಿಕ್ಷಕಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಎದುರಿಸುತ್ತಿದ್ದಾರೆ. ಗುರಪ್ಪನಾಯ್ಡು ವಿರುದ್ದ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಜಿಎಸ್ ಬ್ಲೂಮ್ ಫೀಲ್ಡ್ ಚೇರ್ಮನ್ ಆಗಿರುವ ಗುರಪ್ಪ ನಾಯ್ಡ ತ್ಯಾಗರಾಜನಗರದ ತಮ್ಮ ಖಾಸಗಿ ಶಾಲೆಯ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.
ಗುರಪ್ಪ ನಾಯ್ಡು ಅವರ ವಿರುದ್ಧ ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ), 506 (ಅಪರಾಧ ಬೆದರಿಕೆ), 509 (ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಮಾತು, ಸನ್ನೆ ಅಥವಾ ಕೃತ್ಯ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ) ಮತ್ತು 354 (ಮಹಿಳೆಯ ಮೇಲೆ ಆಕ್ರಮಣ ಅಥವಾ ಕ್ರಿಮಿನಲ್ ಇಚ್ಛೆಯಿಂದ ಅವಳ ನಮ್ರತೆಯನ್ನು ಕೆರಳಿಸುವುದು) ಅಡಿಯಲ್ಲಿ ನವೆಂಬರ್ 26 ರಂದು ಎಫ್ಐಆರ್ ದಾಖಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



