ರಾಜ್ಯ

ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗಾಗಿ ಅರ್ಜಿ ಸಲ್ಲಿಸಲು ದಿನಾಂಕ ಪ್ರಕಟಿಸಿದ ಶಿಕ್ಷಣ ಇಲಾಖೆ

KSEAB ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪಿಯು ಪರೀಕ್ಷಾ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ಪುನರಾವರ್ತಿತ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಬಹುದು.

ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗಾಗಿ ಅರ್ಜಿ ಸಲ್ಲಿಸಲು ದಿನಾಂಕ ಪ್ರಕಟಿಸಿದ ಶಿಕ್ಷಣ ಇಲಾಖೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಪುನರಾವರ್ತಿತ ಅಭ್ಯರ್ಥಿಗಳು ಮತ್ತು 2024-2025ರ ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ತಮ್ಮ ಫಲಿತಾಂಶಗಳನ್ನು ಸುಧಾರಿಸಲು ಬಯಸುವ ಅಭ್ಯರ್ಥಿಗಳಿಗೆ ದಿನಾಂಕಗಳನ್ನು ಬಿಡುಗಡೆ ಮಾಡಿದೆ.

KSEAB ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪಿಯು ಪರೀಕ್ಷಾ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ಪುನರಾವರ್ತಿತ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಬಹುದು ಮತ್ತು ಹಿಂದಿನ ಅಂಕಪಟ್ಟಿಯೊಂದಿಗೆ ತಮ್ಮ ಅರ್ಜಿಗಳನ್ನು ಜಿಲ್ಲಾ ಉಪ ನಿರ್ದೇಶಕರಿಗೆ (ಪದವಿ ಪೂರ್ವ) ಸಲ್ಲಿಸಬೇಕು ಎಂದು ತಿಳಿಸಿದೆ.

2024 ರಲ್ಲಿ ಪರೀಕ್ಷೆಗಳನ್ನು ಬರೆದ ವಿದ್ಯಾರ್ಥಿಗಳ ತಮ್ಮ ಅಂಕಗಳನ್ನು ಸುಧಾರಿಸಲು ಬಯಸಿದರೇ ನಿಗದಿತ ಶುಲ್ಕವನ್ನು ಪಾವತಿಸುವ ಮೂಲಕ ಮಾರ್ಚ್ 2025 ರ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ವಿದ್ಯಾರ್ಥಿಗಳು ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ. 2024 ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು (11 ಅಂಕೆಗಳ ನೋಂದಣಿ ಸಂಖ್ಯೆಯೊಂದಿಗೆ) ಯಾವುದೇ ಅಥವಾ ಎಲ್ಲಾ ವಿಷಯಗಳಲ್ಲಿ ತಮ್ಮ ಫಲಿತಾಂಶಗಳನ್ನು ಹೆಚ್ಚಿಸಲು ಬಯಸುವ ವಿದ್ಯಾರ್ಥಿಗಳು ಸಹ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು. ಆಯಾ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಮೂಲ ಅಂಕಪಟ್ಟಿಯನ್ನು ಸಂಗ್ರಹಿಸಿ ಉಪನಿರ್ದೇಶಕರಿಗೆ ಸಲ್ಲಿಸಬೇಕು. ಆರು ಅಂಕಿಗಳ ನೋಂದಣಿ ಸಂಖ್ಯೆಯನ್ನು ಹೊಂದಿರುವ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ಅನರ್ಹರಾಗಿರುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.