ಶಾಸಕ ಮುನಿರತ್ನ ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಬಿಜೆಪಿ ಸೇರಿ ಪ್ರಮುಖ ನಾಯಕರ ಖಾಸಗಿ ವಿಡಿಯೋ ಪತ್ತೆ?
ಈ ವಿಡಿಯೊಗಳನ್ನು ಹನಿಟ್ರ್ಯಾಪ್ ಮೂಲಕ ಚಿತ್ರೀಕರಿಸಿಕೊಂಡಿರುವ ಶಂಕೆಯಿದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಜಾತಿ ನಿಂದನೆ, ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರ ಮನೆ ಮೇಲೆ ದಾಳಿ ನಡೆಸಿದ್ದ ಎಸ್ಐಟಿ ಅಧಿಕಾರಿಗಳು ಲ್ಯಾಪ್‌ಟಾಪ್ ಮತ್ತು ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಂಡಿದ್ದರು. ಇದರಲ್ಲಿ ಹಲವು ಖಾಸಗಿ ವಿಡಿಯೋಗಳು ಪತ್ತೆಯಾಗಿದ್ದು ಬಿಜೆಪಿ ಸೇರಿದಂತೆ ಕೆಲ ರಾಜಕೀಯ ನಾಯಕರ ಖಾಸಗಿ ಕ್ಷಣದ ವಿಡಿಯೋಗಳು ಇವೆ ಎಂದು ಪೊಲೀಸ್ ಉನ್ನತ ಮೂಲಗಳು ಹೇಳಿವೆ.
ಸೆಪ್ಟೆಂಬರ್ 28ರಂದು ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರ ನಿವಾಸ, ಕಚೇರಿ ಸೇರಿದಂತೆ 12ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿದ್ದರು. ವೈಯಾಲಿ ಕಾವಲ್‌ನಲ್ಲಿರುವ ಮುನಿರತ್ನರ ಮನೆಯಲ್ಲಿ ಶೋಧ ಕಾರ್ಯಾಚರಣೆ ವೇಳೆ ಸಿಕ್ಕ ಲ್ಯಾಪ್‌ಟಾಪ್ ಮತ್ತು ಪೆನ್‌ಡ್ರೈವ್‌ಗಳಲ್ಲಿ ಕೆಲ ರಾಜಕೀಯ ನಾಯಕರ ಹಾಗೂ ಸರ್ಕಾರಿ ಅಧಿಕಾರಿಗಳ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ. ಮಹಿಳೆಯರ ಅಶ್ಲೀಲ ದೃಶ್ಯಗಳು ವಿಡಿಯೋದಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಈ ವಿಡಿಯೊಗಳನ್ನು ಹನಿಟ್ರ್ಯಾಪ್ ಮೂಲಕ ಚಿತ್ರೀಕರಿಸಿಕೊಂಡಿರುವ ಶಂಕೆಯಿದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ದುರುದ್ದೇಶಪೂರ್ವಕವಾಗಿಯೇ ಈ ವಿಡಿಯೋಗಳನ್ನು ಇರಿಸಿಕೊಳ್ಳಲಾಗಿದೆ. ಹೀಗಾಗಿ ಈ ವಿಡಿಯೋಗಳ ಅಸಲಿಯತ್ತು ಪರೀಕ್ಷೆಗಾಗಿ ಪೆನ್‌ಡ್ರೈವ್ ಹಾಗೂ ಲ್ಯಾಪ್‌ಟಾಪ್ ಗಳನ್ನು ಎಫ್ಎಸ್‌ಎಲ್‌ಗೆ ಕಳುಹಿಸಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


