ಮುಡಾ ಹಗರಣ: ನಿಷ್ಪಕ್ಷಪಾತ ತನಿಖೆಗೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಲಿ- ಯದುವೀರ್ ಒಡೆಯರ್
ಸೈಟ್ ವಾಪಸ್ ಕೊಟ್ಟಿರುವುದು ನೋಡಿದರೇ ತಪ್ಪಾಗಿದೆ ಎಂದೇ ಅರ್ಥ. ಸೈಟ್ ಗೆ ಇರುವ ಮೌಲ್ಯಕ್ಕಿಂತ ಐದಾರು ಪಟ್ಟು ಹಣ ಕೇಳಿದ್ದಾರೆ. ಸಿಎಂ ಅವರ ಹೆಸರೇ ಖುದ್ದು ಪ್ರಕರಣದಲ್ಲಿ ಕೇಳಿ ಬಂದಿದೆ.

ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ.
ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸೈಟ್ ವಾಪಸ್ ಕೊಟ್ಟಿರುವುದು ನೋಡಿದರೇ ತಪ್ಪಾಗಿದೆ ಎಂದೇ ಅರ್ಥ. ಸೈಟ್ ಗೆ ಇರುವ ಮೌಲ್ಯಕ್ಕಿಂತ ಐದಾರು ಪಟ್ಟು ಹಣ ಕೇಳಿದ್ದಾರೆ. ಸಿಎಂ ಅವರ ಹೆಸರೇ ಖುದ್ದು ಪ್ರಕರಣದಲ್ಲಿ ಕೇಳಿ ಬಂದಿದೆ. ಆ ಕಾರಣಕ್ಕೆ ಸೂಕ್ತ ತನಿಖೆ ಆಗಲೇಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲೇಬೇಕು. ಇದೊಂದು ಕಪ್ಪುಚುಕ್ಕೆ ತರುವ ವಿಚಾರ. ಅವರು ದುರಾಡಳಿತ ಮಾಡಿದ್ದಾರೆ. ನೇರವಾಗಿ ತಪ್ಪು ಮಾಡಿರುವ ಕಾರಣ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ ಯದುವೀರ್, ‘ಈ ಹಗರಣ ಸಿಎಂ ಅವರ ಪ್ರತಿಷ್ಠೆಗೆ ಮಸಿ ಬಳಿದಿದ್ದು, ನಿಷ್ಪಕ್ಷಪಾತ ತನಿಖೆಗೆ ಅಧಿಕಾರದಿಂದ ಕೆಳಗಿಳಿದಿರುವುದು ಬಹಳ ಮುಖ್ಯ’ ಎಂದು ಹೇಳಿದ್ದಾರೆ. ಅಧಿಕಾರಿಗಳ ಮೇಲೆ ಪ್ರಭಾವ ಬೀರುತ್ತಾರೆ. ಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ವಾಲ್ಮೀಕಿ ಹಗರಣದಲ್ಲೂ ಕೂಡ ತಪ್ಪಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಲೇಬೇಕು. ಸಿಎಂ ಪತ್ನಿಯನ್ನ ರಾಜಕೀಯಕ್ಕೆ ತಂದಿಲ್ಲ. ಮುಖ್ಯಮಂತ್ರಿಯಾಗಲಿ, ಮಹಿಳೆಯಗಾಗಲಿ, ಯಾರೇ ಆಗಲಿ ಆರೋಪ ಬಂದಾಗ ಎದುರಿಸಬೇಕು. ಅವರ ಮೇಲೆ ಆರೋಪ ಬಂದಿದೆ ಹಾಗಾಗಿ ಅವರ ಪತ್ನಿ ತನಿಖೆಯಲ್ಲಿ ಭಾಗಿಯಾಗಲೇಬೇಕು. ಮುಡಾದ ಮೂಲ ಉದ್ದೇಶ ಬಡವರಿಗೆ ಸೈಟ್ ಸಿಗಬೇಕು ಎಂಬುದು. ಆದರೆ ಅದು ಒಂದು ವರ್ಗಕ್ಕೆ ಲಾಭ ಆಗುತ್ತಿದೆ. ಹಾಗಾಗಿ ಸಮಗ್ರ ತನಿಖೆ ಆಗಬೇಕು ಎಂದು ಹೇಳಿದರು.
ಸಿಎಂ ಮೊದಲೇ ಸೈಟ್ ಕೊಟ್ಟಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಯದುವೀರ್, ಈಗ ಏನಾಗಿದೆ? ಏನಾಗಿಲ್ಲ ಅಂತ ಪರಾಮರ್ಶೆ ಮಾಡುವ ಸಂದರ್ಭವಲ್ಲ. ತಪ್ಪಂತೂ ಆಗಿದೆ , ಅದನ್ನ ಅವರೇ ಒಪ್ಪಿಕೊಂಡಿದ್ದಾರೆ. ಅವರ ಕೈ ಹಾಕಿದ್ದಾರಾ ನೋಡಬೇಕಿದೆ. ಹೀಗಾಗಿ ತಕ್ಷಣ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು. ತಾಯಿ ಚಾಮುಂಡೇಶ್ವರಿ ಬೆಟ್ಟದ ಪ್ರಾಧಿಕಾರ ವಿಚಾರ ಕುರಿತು ಪ್ರತಿಕ್ರಿಯಿಸಿದ ಯದುವೀರ್, ಆ ವಿಚಾರ ತಾಯಿ ಚಾಮುಂಡಿಗೆ ಬಿಟ್ಟಿದ್ದು. ನಾವು ಕಾನೂನು, ಸಂವಿಧಾನಾತ್ಮಕವಾಗಿ ಮಾಡುತ್ತೇವೆ. ಅದು ತಾಯಿ ಚಾಮುಂಡಿ ತಾಯಿಯೇ ನಿರ್ಧಾರ ಮಾಡುತ್ತಾಳೆ ಎಂದರು.

ಯದುವೀರ್ ನೇತೃತ್ವದ ಸಭೆ ಯಶಸ್ವಿ: ಮೈಸೂರು ಅರಮನೆ ಮುಂಭಾಗ ಪಾರಿವಾಳಗಳಿಗೆ ಕಾಳು ಹಾಕುವ ಪದ್ಧತಿಗೆ ಬ್ರೇಕ್..!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


