ರಾಜ್ಯ

ಟ್ರಾನ್ಸ್'ಫಾರ್ಮರ್ ದುರಸ್ತಿ ಕಾರ್ಯ ಪೂರ್ಣ: ಹಾರೋಹಳ್ಳಿ-ಟಿಕೆ ಹಳ್ಳಿಗೆ ನೀರು ಪೂರೈಕೆ ಪುನರಾರಂಭ

ಪಂಪಿಂಗ್ ಸ್ಟೇಷನ್‌ಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಸಿಡಿಲು ಬಡಿದು ಟ್ರಾನ್ಸ್‌ಫಾರ್ಮರ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಪರಿಣಾಮ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪಂಪಿಂಗ್ ಸ್ಟೇಷನ್ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿತ್ತು.

ಟ್ರಾನ್ಸ್'ಫಾರ್ಮರ್ ದುರಸ್ತಿ ಕಾರ್ಯ ಪೂರ್ಣ: ಹಾರೋಹಳ್ಳಿ-ಟಿಕೆ ಹಳ್ಳಿಗೆ ನೀರು ಪೂರೈಕೆ ಪುನರಾರಂಭ
ಸಂಗ್ರಹ ಚಿತ್ರ
Published On :

ಬೆಂಗಳೂರು: ಭಾರೀ ಮಳೆ ಹಾಗೂ ಸಿಡಿಲಿನ ಹೊಡೆತದಿಂದಾಗಿ ಹಾರೋಹಳ್ಳಿ ಮತ್ತು ಟಿ.ಕೆ.ಹಳ್ಳಿಗೆ ಸಂಪರ್ಕ ಕಲ್ಪಿಸುವ ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಉಂಟಾದ ತಾಂತ್ರಿಕ ದೋಷವನ್ನು ಸರಿಪಡಿಸಲಾಗಿದ್ದು, ನೀರು ಪೂರೈಕೆ ಕಾರ್ಯವನ್ನು ಪುನರಾರಂಭಿಸಲಾಗಿದೆ ಎಂದು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು ಗುರುವಾರ ತಿಳಿಸಿದ್ದಾರೆ.

ಪಂಪಿಂಗ್ ಸ್ಟೇಷನ್‌ಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಸಿಡಿಲು ಬಡಿದು ಟ್ರಾನ್ಸ್‌ಫಾರ್ಮರ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಪರಿಣಾಮ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪಂಪಿಂಗ್ ಸ್ಟೇಷನ್ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿತ್ತು. ಇದರಿಂದ ನೀರು ಪಂಪ್ ಮಾಡುವುದನ್ನು ನಿಲ್ಲಿಸಲಾಗಿತ್ತು.

ಬಳಿಕ ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಮತ್ತು ಬಿಡಬ್ಲ್ಯೂಎಸ್‌ಎಸ್‌ಬಿ ಸಿಬ್ಬಂದಿ ತುರ್ತು ದುರಸ್ತಿ ಕಾರ್ಯವನ್ನು ನಡೆಸುವ ಮೂಲಕ ತಾಂತ್ರಿಕ ಸಮಸ್ಯೆಯನ್ನು ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್ ವೈಫಲ್ಯದಿಂದ ಸುಮಾರು 10 ಗಂಟೆಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯಗಳು ಎದುರಾಗಿತ್ತು. ಇದೀಗ ನೀರು ಪಂಪ್ ಮಾಡುವ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ರಾತ್ರಿ ವೇಳೆ ಸಮಸ್ಯೆ ಎದುರಾಗಿದ್ದರಿಂದ ಹೆಚ್ಚಿನ ಪರಿಣಾಮ ಬೀರಲಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.