ರಾಜ್ಯ

ಬೆಂಗಳೂರಿನ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

ಕೂಡಲೇ ಕಾಲೇಜು ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ.

ಬೆಂಗಳೂರಿನ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್‌ ಬೆದರಿಕೆ
ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್‌ ಬೆದರಿಕೆ
Published On :

ಬೆಂಗಳೂರು: ಖಾಸಗಿ ಶಾಲೆಗಳು, ಹೋಟೆಲ್​, ಏರ್​ಪೋರ್ಟ್​​ಗಳ ನಂತರ ಇದೀಗ ಬೆಂಗಳೂರಿನ ಮೂರು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಆಯಾ ಸಂಸ್ಥೆಯ ಪ್ರಾಂಶುಪಾಲರ ಅಧಿಕೃತ ಇಮೇಲ್ ಐಡಿಗಳಿಗೆ ಬೆಳಗ್ಗೆ 7.19ಕ್ಕೆ ಇಮೇಲ್ ಕಳುಹಿಸಲಾಗಿದೆ. ವಿವಿ ಪುರಂನಲ್ಲಿರುವ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ), ಬಸವನಗುಡಿಯ ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ (ಬಿಎಂಎಸ್‌ಸಿಇ) ಮತ್ತು ರಾಮಯ್ಯ ಕಾಲೇಜಿಗೆ ಬೆದರಿಕೆ ಇಮೇಲ್ ಕಳುಹಿಸಲಾಗಿದೆ. ಈ ಸಂಬಂಧ ವಿವಿ ಪುರಂ, ಹನುಮಂತನಗರ ಹಾಗೂ ಸದಾಶಿವನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಕೂಡಲೇ ಕಾಲೇಜು ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ.

ಪರಿಶೀಲನೆ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನು ಮುಂಜಾಗೃತ ಕ್ರಮವಾಗಿ ಪೊಲೀಸರು ಮೂರು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಹೊರಗೆ ಕಳುಹಿಸಿದ್ದರು.

ಮೇಲ್‌ನ ವಿಷಯ: ಕೋವೈನಲ್ಲಿನ ಪಾಕ್ ಐಎಸ್‌ಐ ಸೆಲ್ ಗಳಿಂದ ಪಟ್ಟಿ ಮಾಡಲಾದ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿತ ಇಡಿಗಳನ್ನು ಇರಿಸಲಾಗಿದೆ. ಸಂಜೆ 5 ಗಂಟೆಯೊಳಗೆ ಸ್ಥಳಾಂತರಿಸಿ. ಸಾಧನಗಳಿಗಾಗಿ ಬೆಂಚುಗಳ ಅಡಿಯಲ್ಲಿ ಪರಿಶೀಲಿಸಿ ಮತ್ತು BDSS ಗೆ ಕರೆ ಮಾಡಿ ಎಂದು ಬರೆಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.