ಬಿಜೆಪಿ ಶಾಸಕ ಮುನಿರತ್ನಗೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ
ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮುನಿರತ್ನಗೆ 14 ದಿನ ಅಂದರೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಇಂದು ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರು ಪಡಿಸಿದ್ದು, ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಮನವಿ ಮಾಡಿದರು. ಆದ್ರೆ, ಕೋರ್ಟ್, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ಅವರ ಪರ ವಕೀಲರು ಕೋರ್ಟ್ಗೆ ಮನವಿ ಮಾಡಿದ್ದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್ ಸೂಚಿಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ಕೋರ್ಟ್ನಲ್ಲಿ ಅರ್ಜಿ ಹಾಕಿ ಎಂದು ಹೇಳಿದೆ.
ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ರೆಸಾರ್ಟ್‌ನಲ್ಲಿ ತಮ್ಮ ಮೇಲೆ ಮುನಿರತ್ನ ಅತ್ಯಾಚಾರ ನಡೆಸಿದ್ದರು ಎಂದು ಆರೋಪಿಸಿ 40 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಬಂಧನಕ್ಕೊಳಪಡಿಸಲಾಗಿತ್ತು.
ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಮುನಿರತ್ನ ಅವರು ಜೈಲುಪಾಲಾಗಿದ್ದರು. ಬಳಿಕ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದರು. ನಂತರ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



