BMRCL: ಹಳದಿ ಮಾರ್ಗ; ಜನವರಿ 2025 ರಲ್ಲಿ ರೈಲು ಸಂಚಾರ ಆರಂಭ!
ಕೋಚ್‌ಗಳ ಕೊರತೆ ಹಿನ್ನೆಲೆಯಲ್ಲಿ ಆರಂಭದಲ್ಲಿ ಮೂರು ರೈಲುಗಳನ್ನು ಮಾತ್ರ ಓಡಿಸಲು ನಿರ್ಧರಿಸಲಾಗಿದೆ. ಪ್ರತಿ 30 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಬೆಂಗಳೂರು: ಆರ್‌ವಿ ರಸ್ತೆಯಿಂದ ಎಲೆಕ್ಟ್ರಾನಿಕ್ಸ್ ಸಿಟಿ ಮೂಲಕ ಬೊಮ್ಮಸಂದ್ರದವರೆಗೆ ನಮ್ಮ ಮೆಟ್ರೋ ಹಳದಿ ಮಾರ್ಗ ಬಹುತೇಕ ಪೂರ್ಣಗೊಂಡಿದ್ದು, 2025 ರ ಜನವರಿಯಿಂದ ಮೆಟ್ರೋ ರೈಲುಗಳ ಸಂಚಾರ ಪ್ರಾರಂಭವಾಗಲಿದೆ ಎಂದು BMRCL ಶನಿವಾರ ಪ್ರಕಟಿಸಿದೆ.
ಕೋಚ್‌ಗಳ ಕೊರತೆ ಹಿನ್ನೆಲೆಯಲ್ಲಿ ಆರಂಭದಲ್ಲಿ ಮೂರು ರೈಲುಗಳನ್ನು ಮಾತ್ರ ಓಡಿಸಲು ನಿರ್ಧರಿಸಲಾಗಿದೆ. ಪ್ರತಿ 30 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
18.82 ಕಿ. ಮೀ. ಉದ್ದದ ಹಳದಿ ಮಾರ್ಗದಲ್ಲಿ ಎಲ್ಲಾ ಸಿವಿಲ್ ಮತ್ತು ಸಿಸ್ಟಂ ಕಾಮಗಾರಿಗಳು ಗಣನೀಯವಾಗಿ ಪೂರ್ಣಗೊಂಡಿವೆ. ಡಿಸೆಂಬರ್ ನಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರಿಂದ ಶಾಸನಬದ್ಧ ಪರೀಕ್ಷೆ ನಡೆಸಲು ಯೋಜಿಸಲಾಗಿದೆ. ನವೆಂಬರ್- ಡಿಸೆಂಬರ್ ವೇಳೆಗೆ ಮೂರು ರೈಲು ಸೆಟ್ ಲಭ್ಯವಿರುತ್ತವೆ ಎಂದು ತಿಳಿಸಲಾಗಿದೆ.
ರೈಲ್ವೆ ಸುರಕ್ಷತಾ ಮಂಡಳಿಯು ಈಗಾಗಲೇ ಸಿಗ್ನಲಿಂಗ್, ಟ್ರ್ಯಾಕ್ಷನ್ ಮತ್ತು ಬ್ರೇಕಿಂಗ್ ಪರೀಕ್ಷೆಗಳಿಗೆ ತಾಂತ್ರಿಕ ಮಂಜೂರಾತಿ ನೀಡಿದೆ. ಈ ಮಾರ್ಗಕ್ಕೆ ಅಗತ್ಯವಿರುವ ಬೋಗಿಗಳನ್ನು ನಿರ್ಮಿಸಿಕೊಡುವ ಹೊಣೆ ಹೊತ್ತಿರುವ ಟಿಟಾಗರ್ ವ್ಯಾಗನ್ಸ್ ಸಂಸ್ಥೆ ಮುಂದಿನ ವರ್ಷದ ಮಾರ್ಚ್ ನಿಂದ ಪ್ರತಿ ತಿಂಗಳು ಎರಡು ಕೋಚ್ ಗಳನ್ನು ಪೂರೈಕೆ ಮಾಡಲಿದೆ. 2025ರ ಆಗಸ್ಟ್ ವೇಳೆಗೆ ಈ ಮಾರ್ಗಕ್ಕೆ ಬೇಕಾಗಿರುವ ತಲಾ 6 ಬೋಗಿಯ 15 ರೈಲುಗಳು ಸರಬರಾಜಾಗಲಿವೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



