ದಸರಾ ಕವಿಗೋಷ್ಠಿ: ಭಾಗವಹಿಸದಿರಲು ಲೇಖಕಿ ಬಾನು ಮುಷ್ತಾಕ್ ನಿರ್ಧಾರ
ಕವಿಗೋಷ್ಠಿಯಲ್ಲಿ ಈ ಹಿಂದೆ ಪಾಲ್ಗೊಂಡಿದ್ದವರಿಗೆ ಮತ್ತೆ ಅವಕಾಶ ಕೊಟ್ಟಿರುವುದು, ದಕ್ಷಿಣ ಕರ್ನಾಟಕದವರಿಗೆ ಹೆಚ್ಚಿನ ಆದ್ಯತೆ ನೀಡಿರುವ ಉಪ ಸಮಿತಿ ನಡೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪವಾದ ಹಿನ್ನೆಲೆಯಲ್ಲಿ ಅವರು ಈ ಬಾರಿಯ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ

ಮೈಸೂರು: ಈ ಬಾರಿಯ ದಸರಾ ಪ್ರಧಾನ ಕವಿಗೋಷ್ಠಿಯಲ್ಲಿ ಭಾಗವಹಿಸದಿರುವ ಲೇಖಕಿ ಬಾನು ಮುಷ್ತಾಕ್ ನಿರ್ಧರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಫೇಸ್ ಬುಕ್ ಖಾತೆಯಲ್ಲಿ ಭಾನುವಾರ ಫೋಸ್ಟ್ ಹಾಕುವ ಮೂಲಕ ತಮ್ಮ ತೀರ್ಮಾನವನ್ನು ತಿಳಿಸಿದ್ದಾರೆ.
ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಲು ಒಪ್ಪಿದ್ದೆ. ಈ ಹಿಂದೆ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದೆ. ಆದರೆ, ಇತ್ತೀಚಿನ ಕೆಲವು ಸಂವಾದಗಳನ್ನು ಗಮನಿಸಿದಾಗ, ಬೇರೆಯವರಿಗೆ ಅವಕಾಶ ಕೊಡುವುದು ಅಗತ್ಯವೆಂದು ಅನಿಸಿದೆ. ಹೀಗಾಗಿ 2024ರ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದ್ದೇನೆ. ನಿಮಗೆ ಉಂಟಾಗಿರುವ ಅನಾನುಕೂಲಕ್ಕೆ ಕ್ಷಮೆ ಇರಲಿ ಎಂದಿದ್ದಾರೆ.
ಕವಿಗೋಷ್ಠಿಯಲ್ಲಿ ಈ ಹಿಂದೆ ಪಾಲ್ಗೊಂಡಿದ್ದವರಿಗೆ ಮತ್ತೆ ಅವಕಾಶ ಕೊಟ್ಟಿರುವುದು, ದಕ್ಷಿಣ ಕರ್ನಾಟಕದವರಿಗೆ ಹೆಚ್ಚಿನ ಆದ್ಯತೆ ನೀಡಿರುವ ಉಪ ಸಮಿತಿ ನಡೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪವಾದ ಹಿನ್ನೆಲೆಯಲ್ಲಿ ಅವರು ಈ ಬಾರಿಯ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಕವಿಗೋಷ್ಠಿಯಿಂದ ಹಿಂದೆ ಸರಿದವರಲ್ಲಿ ಕವಿ ಆರಿಫ್ ರಾಜಾ ನಂತರ ಬಾನು 2ನೇಯವರಾಗಿದ್ದಾರೆ. ತಾನು ದಸರಾ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿರುವುದಾಗಿ ಆರಿಫ್ ರಾಜಾ ಶನಿವಾರ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


