ವರುಣಾರ್ಭಟಕ್ಕೆ ಉತ್ತರ ಕರ್ನಾಟಕ ತತ್ತರ: ಮೂವರು ಸಾವು; ಪ್ರವಾಹದಲ್ಲಿ ಸಿಲುಕಿಕೊಂಡ 55 ಲಾರಿ; ಗದಗದಲ್ಲಿ ನದಿಯಂತಾದ ರಸ್ತೆಗಳು
ವಿಜಯನಗರ ಜಿಲ್ಲೆಯಲ್ಲಿಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ನಾರಪ್ಪ ಬಣಕಾರ (55) ಮತ್ತು ಪ್ರಶಾಂತ್ ಬಣಕಾರ (45) ಮೃತರು. ಇಬ್ಬರೂ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಾಸನಪುರ ಗ್ರಾಮದವರು.

ಹುಬ್ಬಳ್ಳಿ/ಬಳ್ಳಾರಿ/ಗದಗ: ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.
ವಿಜಯನಗರ ಜಿಲ್ಲೆಯಲ್ಲಿಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ನಾರಪ್ಪ ಬಣಕಾರ (55) ಮತ್ತು ಪ್ರಶಾಂತ್ ಬಣಕಾರ (45) ಮೃತರು. ಇಬ್ಬರೂ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಾಸನಪುರ ಗ್ರಾಮದವರು. ದಾವಣಗೆರೆ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಕುಳಗಟ್ಟೆ ಬಸವರಾಜಪ್ಪ (81) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅವರ ಮಗ ಮತ್ತು ಸೊಸೆ ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ.
ಅವಿಭಜಿತ ಬಳ್ಳಾರಿ ಜಿಲ್ಲೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಕೆಲವೇ ಗಂಟೆಗಳಲ್ಲಿ 130 ಮಿ.ಮೀ ಮಳೆ ಸುರಿದಿದ್ದು, ತೀವ್ರ ಪ್ರವಾಹ ಉಂಟಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲೂ ಭಾರಿ ಮಳೆಯಾಗಿದೆ. 150 ಕ್ಕು ಹೆಚ್ಚು ಮನೆಗಳು ಜಲಾವೃತವಾಗಿವೆ.
ಸಂಡೂರಿನ ಗಣಿಗಾರಿಕೆ ಪ್ರದೇಶದಲ್ಲಿ 55ಕ್ಕೂ ಹೆಚ್ಚು ಗಣಿಗಾರಿಕೆ ಟ್ರಕ್‌ಗಳು ಪ್ರವಾಹದಲ್ಲಿ ಸಿಲುಕಿಕೊಂಡಿವೆ. ವಾಹನದೊಳಗೆ ಸಿಲುಕಿಕೊಂಡಿದ್ದ ಸುಮಾರು 25 ಟ್ರಕ್ ಚಾಲಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. 9,000 ಹೆಕ್ಟೇರ್‌ನಲ್ಲಿ ಭತ್ತ, ಬಾಳೆ, ಮೆಣಸಿನಕಾಯಿ ಬೆಳೆಗಳು ಕೊಚ್ಚಿ ಹೋಗಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಬಳ್ಳಾರಿ ಮತ್ತು ವಿಜಯನಗರ ಎರಡೂ ಜಿಲ್ಲೆಗಳಲ್ಲಿ ತೀವ್ರ ಹಾನಿ ಸಂಭವಿಸಿದ ಗ್ರಾಮಗಳಿಗೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಅವಿಭಜಿತ ಬಳ್ಳಾರಿ ಸಂಸದ ಇ ತುಕಾರಾಂ ಅವರು ಮಳೆ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದರು ಮತ್ತು ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿದರು.
ಗದಗ ಜಿಲ್ಲೆಯ ನರಗುಂದ ಹಾಗೂ ಸುತ್ತಮುತ್ತ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಗಳು ಮಿನಿ ನದಿಗಳಾಗಿ ಮಾರ್ಪಟ್ಟಿವೆ. ಈ ಪ್ರದೇಶದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಎಡೆಬಿಡದೆ ಮಳೆ ಸುರಿದಿದ್ದು, ಜನರು ನಿದ್ದೆಯಿಲ್ಲದ ರಾತ್ರಿ ಕಳೆಯಬೇಕಾಯಿತು. ಮಳೆ ನೀರು ಚರಂಡಿ ನೀರಿನೊಂದಿಗೆ ಸೇರಿ ಹಲವು ಮನೆಗಳಿಗೆ ನೀರು ನುಗ್ಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



