ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್; ಟಾರ್ಚರ್ ನೀಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ: ಸಂತ್ರಸ್ತೆ ಹೇಳಿಕೆ
ಮುನಿರತ್ನ ಅವರ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮೆರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಮಾಜಿ ಸಿಎಂ, ಶಾಸಕರು ಹನಿಟ್ರ್ಯಾಪ್ ವೀಡಿಯೋ ಮಾಡಿಸಿದ್ದಾರೆ.

ಬೆಂಗಳೂರು: ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುವುದಾಗಿ ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆಂದು ಹೇಳಲಾದ ಸಂತ್ರಸ್ತ ಮಹಿಳೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸತ್ರ ಮಹಿಳೆ ಅವರು, ಮಾಜಿ ಸಿಎಂ ಇಬ್ಬರಿಗೆ ಹನಿಟ್ರ್ಯಾಪ್ ಮಾಡಿ ಟಾರ್ಚರ್ ನೀಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂಬ ಸ್ಪೋಟಕ ಮಾಹಿತಿ ಹೇಳಿದ್ದಾರೆ. ಮುನಿರತ್ನ ಅವರ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮೆರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಮಾಜಿ ಸಿಎಂ, ಶಾಸಕರು ಹನಿಟ್ರ್ಯಾಪ್ ವೀಡಿಯೋ ಮಾಡಿಸಿದ್ದಾರೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ಎಸಿಪಿ, ಸಿಪಿಐ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ನನ್ನ ಹಾಗೂ ಮುನಿರತ್ನ ಬ್ರೈನ್ ಮ್ಯಾಪಿಂಗ್ ಮಾಡಿಸಲಿ ಎಂದು ಅಶ್ವತ್ಥ ನಾರಾಯಣ, ಅಶೋಕ್ ಗೆ ಸಂತ್ರಸ್ಥೆ ಚಾಲೆಂಜ್ ಮಾಡಿದ್ದಾರೆ.
ಹನಿಟ್ರ್ಯಾಪ್ ಮಾಡುವುದಕ್ಕೆ ನನ್ನನ್ನು ಬಳಕೆ ಮಾಡಿಕೊಂಡಿಲ್ಲ, ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಸಿನಿಮಾ ನಟಿಯರು ಇಲ್ಲ. ಇನ್ನು ಹನಿಟ್ರ್ಯಾಪ್‌ಗೆ ಬಳಸಿಕೊಳ್ಳಲಾದ ಸುಮಾರು ಐದಾರು ಸಂತ್ರಸ್ತ ಮಹಿಳೆಯರು ಹೆದರಿಕೊಂಡು ಸುಮ್ಮನಾಗಿದ್ದಾರೆ. ಅವರು ಕೂಡ ನನ್ನಂತೆಯೇ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದು ಹೇಳಿದರು. ಅನೇಕ ಮಹಿಳೆಯರನ್ನು ಶಾಸಕ ಮುನಿರತ್ನ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಲವು ರಾಜಕೀಯ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲು ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ವಿಜಯೇಂದ್ರ 10 ನಿಮಿಷ ಅಪಾಯಿಂಟ್ ಮೆಂಟ್ ಬೇಕಿದೆ. ಹತ್ತೇ ಹತ್ತು ನಿಮಿಷ ಅವರ ಜೊತೆ ಮಾತಾಡಬೇಕು. ಇದಕ್ಕೆ ಅವಕಾಶ ಮಾಡಿಕೊಡಿ ಎಂದರು. ಇಷ್ಟೆಲ್ಲ ಆದ್ರೂ ಮುನಿರತ್ನ ಪಕ್ಷದಲ್ಲಿ ಇರಿಸಿಕೊಂಡಿದ್ದೀರಲ್ಲ ಎಂದು ಕೇಳಬೇಕಿದೆ ಎಂದು ಹೇಳಿದ್ದಾರೆ.

ಶಾಸಕ ಮುನಿರತ್ನ ಮನೆಯಲ್ಲಿ ಸಿಕ್ಕ ಪೆನ್ಡ್ರೈವ್ನಲ್ಲಿ ಬಿಜೆಪಿ ಸೇರಿ ಪ್ರಮುಖ ನಾಯಕರ ಖಾಸಗಿ ವಿಡಿಯೋ ಪತ್ತೆ?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


