ಕೋಲಾರದಲ್ಲಿ ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ: ತಾಯಿ-ಮಗ ಬಲಿ
ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಮೃತ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ.

ಬೆಂಗಳೂರು: ನಗರದ ಸಹಕಾರ ನಗರದ ರೈಲ್ವೆ ಅಂಡರ್ಪಾಸ್ ಬಳಿ ಹಿಟ್ ಆ್ಯಂಡ್ ರನ್ಗೆ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಇಂದು ಬುಧವಾರ ಮುಂಜಾನೆ 5 ಗಂಟೆ ಸುಮಾರಿಗೆ ನಡೆದಿದೆ. ವಾಹನಕ್ಕೆ ಸಿಲುಕಿ ಅನಾಮಿಕ ವ್ಯಕ್ತಿ ಬಲಿಯಾಗಿದ್ದಾರೆ. ಅಪಘಾತ ನಡೆಸಿ ಚಾಲಕ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಮೃತ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ.
ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ, ತಾಯಿ-ಮಗ ಬಲಿ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ಅಪರಿಚಿತ ವಾಹನ ಬೈಕ್ಗೆ ಡಿಕ್ಕಿಯಾಗಿ ತಾಯಿ-ಮಗ ಮೃತಪಟ್ಟ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ಗೆ ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ(48ವ), ಪುತ್ರ ರಘು(26ವ) ಬಲಿಯಾಗಿದ್ದಾರೆ. ಶ್ರೀನಿವಾಸಪುರದಿಂದ ಸ್ವಗ್ರಾಮ ಕೇತಗಾನಹಳ್ಳಿಗೆ ತೆರಳುವಾಗ ದುರಂತ ಸಂಭವಿಸಿದೆ. ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನದ ಪತ್ತೆಗಾಗಿ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಲಾಗುತ್ತಿದೆ. ಶ್ರೀನಿವಾಸಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


