ಅಂತರ್ಜಲ ಮಟ್ಟ ಹೆಚ್ಚಳಕ್ಕೆ BBMP ಕ್ರಮ: ನಗರದ ಉದ್ಯಾನಗಳಲ್ಲಿ 634 ಇಂಗು ಗುಂಡಿಗಳ ನಿರ್ಮಾಣ!
ಪಾಲಿಕೆ ಮತ್ತು ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ 1,280 ಉದ್ಯಾನಗಳಿವೆ. ಸ್ಥಳಾವಕಾಶ ಆಧರಿಸಿ ಹಂತ ಹಂತವಾಗಿ ಇಂಗು ಗುಂಡಿಗಳನ್ನು ತೋಟಗಾರಿಕೆ ವಿಭಾಗದಿಂದ ನಿರ್ಮಿಸಲಾಗುತ್ತದೆ.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಉದ್ಯಾನವನಗಳಲ್ಲಿ ಮಳೆ ನೀರು ಸಂಗ್ರಹಿಸಲು ಮತ್ತು ಅಂತರ್ಜಲ ಮಟ್ಟ ಹೆಚ್ಚಿಸಲು 634 ಇಂಗು ಗುಂಡಿಗಳನ್ನು ನಿರ್ಮಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಹೇಳಿದ್ದಾರೆ.
ಪಾಲಿಕೆ ಮತ್ತು ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ 1,280 ಉದ್ಯಾನಗಳಿವೆ. ಸ್ಥಳಾವಕಾಶ ಆಧರಿಸಿ ಹಂತ ಹಂತವಾಗಿ ಇಂಗು ಗುಂಡಿಗಳನ್ನು ತೋಟಗಾರಿಕೆ ವಿಭಾಗದಿಂದ ನಿರ್ಮಿಸಲಾಗುತ್ತದೆ. 12 ಅಡಿ ಆಳ ಹಾಗೂ 5 ಅಡಿ ಅಗಲ ಅಳತೆಯ ಇಂಗು ಗುಂಡಿಗಳನ್ನು ನಿರ್ಮಿಸಲಿದ್ದು, ನಾಲ್ಕು ಸಾವಿರ ಲೀಟರ್ ಮಳೆ ನೀರನ್ನು ಸಂಗ್ರಹವಾಗುವಂತೆ ಮಾಡಲಾಗಿದೆ ಎಂದು ಹೇಳಿದರು.
ಮಳೆ ನೀರು ಸಂಗ್ರಹಿಸಿ, ಇಂಗಿಸುವ ಮತ್ತು ಅಂತರ್ಜಲ ಮಟ್ಟವನ್ನು ಹೆಚ್ಚಿಸಲು 2025ರ ಮಾರ್ಚ್ ಅಂತ್ಯಕ್ಕೆ ಒಟ್ಟು ಒಂದು ಸಾವಿರ ಇಂಗು ಗುಂಡಿಗಳನ್ನು ನಿರ್ಮಿಸುವ ಗುರಿ ಇದೆ. ವೈಜ್ಞಾನಿಕವಾಗಿ ಇಂಗು ಗುಂಡಿಗಳನ್ನು ನಿರ್ಮಿಸಲಾಗುತ್ತಿದೆ. ನೀರು ಹರಿದು ಹೋಗುವ ಗುಂಡಿಯ ದ್ವಾರಕ್ಕೆ ಕಬ್ಬಿಣದ ಪರದೆ ಅಳವಡಿಸಲಾಗಿದೆ.
ಈ ಮೂಲಕ ನೀರಿನಲ್ಲಿ ಕಸ-ಕಡ್ಡಿ ಗುಂಡಿಗೆ ಸೇರುವುದನ್ನು ತಡೆದು, ಶೇ 80 ರಷ್ಟು ಪ್ರಮಾಣದ ನೀರು ಇಂಗುಗುಂಡಿಗೆ ಸೇರುವಂತೆ ಮಾಡಲಾಗಿದೆ. ಈ ಇಂಗು ಗುಂಡಿಗಳು 4000 ಲೀಟರ್ ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದು, ಉದ್ಯಾನವನಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



