ಹಿರಿಯ ಪತ್ರಕರ್ತ, ಬೆಂಗಳೂರು ಪ್ರೆಸ್ ಕ್ಲಬ್ ಖಜಾಂಚಿ ಗಣೇಶ್ ವಿಧಿವಶ
ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು

ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಕ್ರೈಂ ಗಣೇಶ್ ಎಂದೇ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಗಣೇಶ್ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.
ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಸದ್ಯ ಟಿವಿ 5 ಚಾನಲ್ ನಲ್ಲಿ ಔಟ್ ಪುಟ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು.
ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯವರಾಗಿದ್ದ ಗಣೇಶ್ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಇಂದು ಅವರ ಮೃತದೇಹವನ್ನು ತಾಳೆಕೆರೆಗೆ ಕೊಂಡೊಯ್ದು ಗುಡ್ಡೆ ರಂಗನಾಥಸ್ವಾಮಿ ಗುಡಿ ರಸ್ತೆಯಲ್ಲಿರುವ ಅವರ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು. ಕಸ್ತೂರಿ ಟಿವಿ ಮೂಲಕ ಕಸ್ತೂರಿ ಗಣೇಶ್ ಎಂದು ಪರಿಚಿತರಾಗಿದ್ದ ಗಣೇಶ್ ಅವರ ಕ್ರೈಂ ವರದಿಗಾರಿಕೆಯಲ್ಲಿ ನಿಪುಣರಾಗಿದ್ದರು. ಅವರ ಮಾರ್ಗದರ್ಶನದಲ್ಲಿ ಇಂದು ಹಲವಾರು ಯುವ ಪತ್ರಕರ್ತರು ಯಶಸ್ವಿ ಪತ್ರಕರ್ತರಾಗಿ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ: ಅಧ್ಯಕ್ಷರಾಗಿ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ಳಿತಟ್ಟೆ ಆಯ್ಕೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


