ಎಸ್‌ಸಿ ಒಳ ಮೀಸಲಾತಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಹೈಕಮಾಂಡ್ ಭೇಟಿಗೆ ನಿರ್ಧಾರ
ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯದ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ ಅವರು ಈ ವಿಷಯ ಪ್ರಸ್ತಾಪಿಸಿದರು. ಆಡಳಿತ ಪಕ್ಷವನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಬೆಂಗಳೂರು: ಪರಿಶಿಷ್ಟ ಜಾತಿಗೆ (ಎಸ್‌ಸಿ) ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗಳು ನಡೆಸಿದ್ದು, ಸಭೆಯಲ್ಲಿ ಹೈಕಮಾಂಡ್ ಭೇಟಿಗೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯದ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ ಅವರು ಈ ವಿಷಯ ಪ್ರಸ್ತಾಪಿಸಿದರು. ಆಡಳಿತ ಪಕ್ಷವನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಎಸ್‌ಸಿ ವರ್ಗದ ಎಲ್ಲಾ ಸಮುದಾಯಗಳ ಹಿತಾಸಕ್ತಿಗಳನ್ನು ಪರಿಗಣಿಸಬೇಕಾಗಿರುವುದರಿಂದ ವಿಷಯ ಸೂಕ್ಷ್ಮವಾಗಿದೆ. ಈ ಮೀಸಲಾತಿಯು ಸಮುದಾಯಕ್ಕೆ ಸಹಾಯ ಮಾಡುತ್ತದೆ ಎಂದು ಮನವರಿಕೆ ಮಾಡುವುದು ಅಗತ್ಯವಿದೆ ಎಂದು ತಿಳಿಸಿದರು ಎಂದು ಮೂಲಗಳು ತಿಳಿಸಿವೆ.
ಅಕ್ಟೋಬರ್ 21 ರಂದು ಎಸ್‌ಸಿ ವರ್ಗದ ವಿವಿಧ ಸಮುದಾಯಗಳಿಗೆ ಸೇರಿದ ಕಾಂಗ್ರೆಸ್ ಶಾಸಕರು ಸಭೆ ನಡೆಸಿ, ಒಳಮೀಸಲಾತಿ ಕುರಿತು ಅಂತಿಮ ನಿರ್ಧಾರಕ್ಕೆ ಬರಲಿದ್ದು, ಬಳಿಕ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



