ರಾಜ್ಯ

BBMP ಮುಖ್ಯ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ: FIR ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯ ಆಯುಕ್ತರ ಭಾವಚಿತ್ರ, ಹೆಸರು, ಹುದ್ದೆ ಮತ್ತು ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದೆ.

BBMP ಮುಖ್ಯ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ: FIR ದಾಖಲು
ತುಷಾರ್ ಗಿರಿನಾಥ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ
Published On :

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆಯಲಾಗಿದ್ದು, ಈ ಸಂಬಂಧ ಕೆಲವು ದೂರುಗಳನ್ನು ಸ್ವೀಕರಿಸಿದ ನಂತರ ಶುಕ್ರವಾರ ಸಿಇಎನ್ ಪೊಲೀಸ್ ಠಾಣೆಯಲ್ಲಿ (ಕೇಂದ್ರ ವಿಭಾಗ) ಎಫ್‌ಐಆರ್ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯ ಆಯುಕ್ತರ ಭಾವಚಿತ್ರ, ಹೆಸರು, ಹುದ್ದೆ ಮತ್ತು ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಫೇಸ್ ಬುಕ್ ಖಾತೆ (https://www.facebook.com/share/72znq6cB8NENELpo/) ತೆರೆಯಲಾಗಿದೆ.

ನಕಲಿ ಫೇಸ್‌ಬುಕ್ ಖಾತೆ ಮೂಲಕ ಪಾಲಿಕೆಯ ಅಧಿಕಾರಿಗಳು, ನೌಕರರು ಹಾಗೂ ಸಾರ್ವಜನಿಕರನ್ನು ವಂಚಿಸುವ ಸಾಧ್ಯತೆಯಿದ್ದು, ಸದರಿ ಫೇಸ್‌ಬುಕ್ ಖಾತೆಯನ್ನು ಡಿಲೀಟ್ ಮಾಡಿ, ಖಾತೆ ತೆರೆದಿರುವ ಅಪರಿಚಿತರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ದೂರು ನೀಡಲಾಗುವುದು ಎಂದು ಪಾಲಿಕೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಅಪರಿಚಿತರ ಸಂಖ್ಯೆಯ ವಾಟ್ಸಾಪ್ ಡಿಪಿಯಲ್ಲಿ ಗಿರಿನಾಥ್ ಅವರ ಚಿತ್ರವನ್ನು ಬಳಸಲಾಗಿತ್ತು. ಇ-ಕಾಮರ್ಸ್ ಕಂಪನಿಗಳಿಂದ ಉಡುಗೊರೆಗಳನ್ನು ಆರ್ಡರ್ ಮಾಡಿ ಅವರಿಗೆ ಕಳುಹಿಸಲು ಅಧಿಕಾರಿಗಳಿಗೆ ಕೇಳಲಾಗಿತ್ತು.

ಈ ವರ್ಷದ ಮೇ ನಲ್ಲಿ ಇಂಜಿನಿಯರ್ ಗಳಿಗೆ ಗುಡ್ ಮಾರ್ನಿಂಗ್ ಎಂಬ ಶುಭಾಶಯ ಕಳುಹಿಸಿ ಎಲ್ಲಿದ್ದೀರಾ ಎಂದು ಅವರನ್ನು ಕೇಳಲಾಗಿತ್ತು. ಈ ಎರಡು ಘಟನೆಗಳಿಗೆ ಸಂಬಂಧಿಸಿದಂತೆ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.