ವಿಜಯದಶಮಿಯಂದೇ ಜಿಟಿಜಿಟಿ ಮಳೆ: ಬೆಂಗಳೂರು, ರಾಜ್ಯದ ಹಲವೆಡೆ ಮುಂದಿನ 7 ದಿನ ವರ್ಷಧಾರೆ ಸಾಧ್ಯತೆ, ಅಲರ್ಟ್ ಘೋಷಣೆ!
ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನಗಳವರೆಗೆ ಹಲವು ಕಡೆ ಮಳೆ ಸಾಧ್ಯತೆಯಿದೆ.

ಬೆಂಗಳೂರು: ಬೆಂಗಳೂರಿನ ಹಲವೆಡೆ ಇಂದು ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು ಅಕ್ಟೋಬರ್ 17ರವರೆಗೆ ಬೆಂಗಳೂರು ಹಾಗೂ ಮುಂದಿನ 7 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದ ಹವಾಮಾನ ಇಲಾಖೆ ಹೇಳಿದೆ.
ವಿಜಯದಶಮಿಯಂದೆ ಬೆಂಗಳೂರಿನಲ್ಲಿ ಮಳೆಯ ಸಿಂಚನವಾಗಿದ್ದು ಇಂದು ಮಧ್ಯಾಹ್ನದಿಂದಲೇ ನಗರದ ರಿಚ್ಮಂಡ್ ವೃತ್ತ, ಶಾಂತಿನಗರ, ಆಡುಗೋಡಿ, ಕೆಆರ್ ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯಾಗಿದೆ. ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತವಾಗಿದ್ದು ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಇನ್ನು ಹಾವೇರಿ, ಇಲಕಲ್ ಮತ್ತು ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಿದೆ.
ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರುದಿನಗಳವರೆಗೆ ಹಲವು ಕಡೆ ಮಳೆ ಸಾಧ್ಯತೆಯಿದೆ. ಇನ್ನು ಅಕ್ಟೋಬರ್16 ರಿಂದ 18ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಬಹುದು.
ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



