ಅತ್ಯಾಚಾರ ಆರೋಪ: A1 ಮುನಿರತ್ನ ಬಿಟ್ಟು ಉಳಿದವರ ಪೈಕಿ ಮೂವರಿಗೆ ಜಾಮೀನು ಮಂಜೂರು
ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆರೋಪಿಗಳಾದ ಲೋಹಿತ್, ಕಿರಣ್ ಮತ್ತು ಮಂಜುನಾಥ್ ಗೆ ಜಾಮೀನು ಮಂಜೂರು ಮಾಡಿದರು.

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿ ಮುನಿರತ್ನ ಹೊರತು ಪಡಿಸಿ ಉಳಿದವರ ಮೂವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆರೋಪಿಗಳಾದ ಲೋಹಿತ್, ಕಿರಣ್ ಮತ್ತು ಮಂಜುನಾಥ್ ಗೆ ಜಾಮೀನು ಮಂಜೂರು ಮಾಡಿದರು.
Information Technology Act 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್ ದಾಖಲಾಗಿದೆ. ಮುನಿರತ್ನ ನಾಯ್ಡು (A1), ವಿಜಯ್ ಕುಮಾರ್ (A2), ಸುಧಾಕರ (A3), ಕಿರಣ್ ಕುಮಾರ್ (A4), ಲೋಹಿತ್ ಗೌಡ (A5), ಮಂಜುನಾಥ (A6), ಲೋಕಿ (A7) ಎಂಬವರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿತ್ತು.
ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತ ಮಹಿಳೆ ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



