ಬೆಂಗಳೂರು: ಚಡ್ಡಿ ಮೇಲೆ ಪಂಚೆ ಧರಿಸದ್ದಕ್ಕೆ ತಂದೆಯನ್ನೇ ಹತ್ಯೆಗೈದ ಮಗ!
ಕೇರಳ ಮೂಲದ ವೇಲಾಯುದನ್ (76) ಹತ್ಯೆಯಾದ ದುರ್ದೈವಿ. ವಿನೋದ್ ಕುಮಾರ್ (42) ಆರೋಪಿ. ವೇಲಾಯುಧನ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.

ಬೆಂಗಳೂರು: ಚಡ್ಡಿ ಮೇಲೆ ಪಂಚೆ ಧರಸಿದ್ದಕ್ಕೆ ಕೆಂಡಾಮಂಡಲಗೊಂಡ ಪುತ್ರನೊಬ್ಬ ತಂದೆಯನ್ನೇ ಹತ್ಯೆ ಮಾಡಿರುವ ಘಟನೆಯೊಂದು ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ಶನಿವಾರ ನಡೆದಿದೆ.
ಕೇರಳ ಮೂಲದ ವೇಲಾಯುದನ್ (76) ಹತ್ಯೆಯಾದ ದುರ್ದೈವಿ. ವಿನೋದ್ ಕುಮಾರ್ (42) ಆರೋಪಿ. ವೇಲಾಯುಧನ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ಆರೋಪಿ ವಿನೋದ್ ಕುಮಾರ್ (42) ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು, ಶನಿವಾರ ಬೆಳಗ್ಗೆ 11.30ರ ಸುಮಾರಿಗೆ ತಂದೆ-ಮಗನ ನಡುವೆ ಜಗಳ ಶುರುವಾಗಿದೆ.
ಆರೋಪಿ ತನ್ನ ತಂದೆಗೆ ಚಡ್ಡಿ ಧರಿಸಿ, ನಂತರ ಪಂಚೆ ಹಾಕಿಕೊಳ್ಳುವಂತೆ ತಿಳಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಸಮರ ಶುರುವಾಗಿದೆ. ಇದರಿಂದ ಕೆಂಡಾಮಂಡಲಗೊಂಡಿರುವ ವಿನೋದ್ ತಂದೆಗೆ ಥಳಿಸಿದ್ದು, ಗೋಡೆಗೆ ತಲೆಯನ್ನು ಗುದ್ದಿಸಿದ್ದಾನೆ. ಪರಿಣಾಮ ವೇನಾಯುಧನ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಘಟನೆ ಬಳಿಕ ವಿನೋದ್ ಕುಮಾರ್ ಸ್ಥಳದಿಂದ ಪರಾರಿಯಾಗಿದ್ದು, ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಭಾನುವಾರ ಬೆಳಗ್ಗೆ ವಿನೋದ್‌ನನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



