ಬೆಂಗಳೂರು-ಕಲಬುರಗಿ ನಡುವೆ ದೀಪಾವಳಿ ವಿಶೇಷ ರೈಲು ವ್ಯವಸ್ಥೆ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ (SWR) ನಿರ್ಧರಿಸಿದೆ.

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಗೆ ಅನುಗುಣವಾಗಿ ಬೆಂಗಳೂರು ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ (SWR) ನಿರ್ಧರಿಸಿದೆ.
ಬೆಂಗಳೂರು-ಕಲಬುರಗಿ ಎಕ್ಸ್‌ಪ್ರೆಸ್ ವಿಶೇಷ ರೈಲು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ) ನಿಂದ ಅಕ್ಟೋಬರ್ 30 ಮತ್ತು ನವೆಂಬರ್ 2, 2024 ರಂದು ರಾತ್ರಿ 9.15 ಕ್ಕೆ ಹೊರಟು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಅಡೋಣಿ, ಮಂತ್ರಾಲಯ ರಸ್ತೆ, ರಾಯಚೂರು, ಕೃಷ್ಣ, ಯಾದಗಿರಿ ಮತ್ತು ಶಹಾಬಾದ್ ನಿಲ್ದಾಣಗಳ ಮೂಲಕ ಮರುದಿನ ಬೆಳಿಗ್ಗೆ 7.40 ಕ್ಕೆ ಕಲಬುರಗಿ ತಲುಪಲಿದೆ ಎಂದು ಎಸ್‌ಡಬ್ಲ್ಯೂಆರ್ ತಿಳಿಸಿದೆ.
ಕಲಬುರಗಿ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಬೆಳಿಗ್ಗೆ 9.35 ಕ್ಕೆ ಕಲಬುರಗಿಯಿಂದ ಹೊರಟು ಅದೇ ಮಾರ್ಗದಲ್ಲಿ ಅದೇ ದಿನ ರಾತ್ರಿ 8 ಗಂಟೆಗೆ ಎಸ್‌ಎಂವಿಟಿ, ಬೆಂಗಳೂರು ತಲುಪುತ್ತದೆ.
ಈ ರೈಲು 12 ಜನರಲ್ ಸೆಕೆಂಡ್ ಕ್ಲಾಸ್ ಕೋಚ್‌ಗಳು, 3 ಸ್ಲೀಪರ್ ಕ್ಲಾಸ್ ಕೋಚ್‌ಗಳು, 2 ಎಸಿ ತ್ರೀ-ಟೈರ್ ಕೋಚ್‌ಗಳು, ಒಂದು ಲಗೇಜ್/ಬ್ರೇಕ್ ವ್ಯಾನ್ ಕಮ್ ಜನರೇಟರ್ ಕಾರ್ ಮತ್ತು ಒಂದು ಸೆಕೆಂಡ್ ಕ್ಲಾಸ್ ಲಗೇಜ್, ಡಿಸೇಬಲ್ ಕೋಚ್‌ನೊಂದಿಗೆ ಬ್ರೇಕ್ ವ್ಯಾನ್ ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


